ದೇವೇಂದ್ರಪ್ಪ ಗಣಮುಖಿಗೆ ಉತ್ತಮ ಶಿಕ್ಷಕ ಪ್ರಶಸ್ತಿ
ಕಲಬುರಗಿ,ಜು.12-ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕøತ ಶಿಕ್ಷಕರ ಕೇಂದ್ರ ಸಮಿತಿ ವತಿಯಿಂದ ಕೊಡ ಮಾಡುವ “ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ”ಗೆ ಝಾಪೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ದೇವೇಂದ್ರಪ್ಪ ಗಣಮುಖಿಯವರು ಆಯ್ಕೆಯಾಗಿದ್ದಾರೆ.
ಜುಲೈ 23ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಕೊಂಡಜ್ಜಿ ಭವನದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ ಹಾಗೂ ಪಿ.ಜಿ.ಆರ್ ಸಿಂಧ್ಯಾ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಶಿಕ್ಷಕ ಗಣಮುಖಿ ಅವರ ಆಯ್ಕೆಗೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ದೇವೇಂದ್ರಪ್ಪ ಬಡಿಗೇರ್ ಹರ್ಷ ವ್ಯಕ್ತಪಡಿಸಿದ್ದಾರೆ.