ವಿಶ್ವ ಜನಸಂಖ್ಯಾ ದಿನ
ಬೀದರ:ಜು.12:ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಬೀದರ ಶಾಖೆಯ ವತಿಯಿಂದ ಘೋಡಂಪಳ್ಳಿ ಗ್ರಾಮದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ & ಪಿ.ಯು. ಕಾಲೇಜ್‍ನಲ್ಲಿ “ವಿಶ್ವ ಜನಸಂಖ್ಯಾ ದಿನ” ಕುರಿತು ವಿದ್ಯಾರ್ಥಿಗಳಿಗೆ ಅರಿವು/ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಎಫ್‍ಪಿಎಐ ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಸವಿತಾ ಚಾಕೋತೆ ಇವರು ಕಾರ್ಯಕ್ರಮ ಉದ್ಘಾಟಿಸಿ, “ಜನಸಂಖ್ಯೆ ನಿಯಂತ್ರಣದಲ್ಲಿ ಯುವಕರ ಪಾತ್ರ ಮಹತ್ತರವಾಗಿದೆ ಹಾಗೂ ಯುವ ಪೀಳಿಗೆ ಬೆಳೆಯುತ್ತಿರುವ ಜನಸಂಖ್ಯೆ, ಅದರ ಪರಿಣಾಮಗಳನ್ನು ಅರಿತುಕೊಳ್ಳಬೇಕು. ಜನಸಂಖ್ಯಾ ಸ್ಪೋಟ, ಮತ್ತು ಜನಸಂಖ್ಯಾ ನಿಯಂತ್ರಣ ತುಂಬಾ ಪ್ರಮುಖವಾದ ಅಂಶಗಳು. ಇದನ್ನು ಅರಿತು ಯುವ ಜನರು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಜನಸಂಖ್ಯೆ ಬೆಳವಣಿಗೆಯು ಸಾಮಾಜಿಕ, ಆರ್ಥಿಕ ಅಭಿವೃದ್ದಿಗೆ ಪೂರಕವಾಗಿರಬೇಕೇ ಹೊರತು ಮಾರಕವಾಗರಬಾರದು ಎಂದು ತಿಳಿಸಿದರು.
ಎಫ್‍ಪಿಎಐ ಸಂಸ್ಥೆಯ ಕಾರ್ಯಕಾರಿಣಿ ಸಭೆಯ ಸದಸ್ಯರಾದ ಶ್ರೀಮತಿ ಪದ್ಮಜಾ ಪೊದ್ದಾರ್ ಇವರು ವಿದ್ಯಾರ್ಥಿಗಳು ಭವಿಷ್ಯದಲ್ಲಿ ಹೆಮ್ಮರವಾಗಿ ಬೆಳೆಯುವ ಸಿರಿ- ಸಂಪತ್ತುಗಳು. ಆದ್ದರಿಂದ ಮಕ್ಕಳು ವಿದ್ಯಾರ್ಥಿ ಹಂತದಲ್ಲಿಯೇ ತಮ್ಮ ಜೀವನದಲ್ಲಿ ಒಳ್ಳೆಯ ಧನಾತ್ಮಕ ಚಿಂತನೆ, ಸಧೃಢ ಮನೋಭಾವ, ಒಳ್ಳೆಯ ಸಂಸ್ಕøತಿ, ಅಚಲ ಛಲ- ನಿರ್ಧಾರಗಳನ್ನು ಅಳವಡಿಸಿಕೊಂಡು ಬೆಳೆಯಬೇಕು. ಯುವ ಶಕ್ತಿಯೇ ದೇಶದ ಶಕ್ತಿ ಎಂದು ಸ್ಫೂರ್ತಿದಾಯಕವಾಗಿ ತಿಳಿಸಿ, ವಿದ್ಯಾರ್ಥಿಗಳಿಗೆ ಹುರಿದುಂಬಿಸಿದರು.
ಎಫ್‍ಪಿಎಐ ಸಂಸ್ಥೆಯ ಶಾಖಾ ವ್ಯವಸ್ಥಾಪಕರಾದ ಶ್ರೀನಿವಾಸ ಬಿರಾದಾರ ಇವರು ಜನಸಂಖ್ಯೆ, ಅದರ ಸ್ಥಿತಿಗತಿ ಮತ್ತು ಅಧಿಕ ಜನಸಂಖ್ಯೆಯಿಂದ ದೇಶ ಮತ್ತು ಜನರ ಮೇಲಾಗುವ ಪರಿಣಾಮಗಳ ಕುರಿತು ವಿವರವಾಗಿ ತಿಳಿಸಿದರು. ಹಾಗೂ ಹೆಚ್ಚುತ್ತಿರುವ ಜನಸಂಖ್ಯೆ ವಾತಾವರಣದ ಅಸಮತೋಲನಕ್ಕೆ ಕಾರಣವಾಗಿ ಅನೇಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಯುವಕರು ಉತ್ತಮ ಗುಣಗಳನ್ನು ಬೆಳೆಸಿಕೊಂಡರೆ ಮಾತ್ರ ದೇಶದ ಭವಿಷ್ಯ ಉಜ್ವಲವಾಗುತ್ತದೆ. ಜೀವನದ ಮೌಲ್ಯಗಳನ್ನು ಅರಿಯಬೇಕು, ಆವಾಗ ಮಾತ್ರ ಸಧೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ತಿಳಿಸಿದರು.
ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ & ಪಿ.ಯು. ಕಾಲೇಜ್‍ನ ಪ್ರಾಚಾರ್ಯರಾದ ಶ್ರೀ ಶರಣಪ್ಪಾ ಬಿರಾದಾರ ಇವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಇತ್ತೀಚಿಗೆ ಸಂಭವಿಸುತ್ತಿರುವ ಪ್ರಕೃತಿ ವಿಕೋಪಗಳಿಗೆ ಮಾನವನೇ ಮುಖ್ಯ ಕಾರಣ. ಜನಸಂಖ್ಯಾ ಸ್ಪೋಟವನ್ನು ತಡೆಗಟ್ಟಬೇಕು. ನಮ್ಮ ನೈಸರ್ಗಿಕ ಸಂಪತ್ತನ್ನು ಸಂರಕ್ಷಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈPಂI ಸಂಸ್ಥೆಯು ತನ್ನ 50 ವರ್ಷಗಳ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಚಟುಟಿಕೆಗಳಲ್ಲಿ ವಿಜೇತರಾದ ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪ್ರಶಸ್ತಿಪತ್ರಗಳನ್ನು & ನೆನಪಿನ ಕಾಣಿಕೆಗಳನ್ನು ನೀಡಿ, ಪ್ರೋತ್ಸಾಹಿಸಲಾಯಿತು.
ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ & ಪಿ.ಯು. ಕಾಲೇಜ್‍ನ ಉಪ ಪ್ರಾಚಾರ್ಯರಾದ ಶ್ರೀ ರವೀಂದ್ರ ಚಟ್ನಳ್ಳಿ ಇವರು ಸ್ವಾಗತ ಕೋರಿದರು ಹಾಗೂ ಕನ್ನಡ ಉಪನ್ಯಾಸಕರಾದ ಶ್ರೀ ದೇವಿದಾಸ ಇವರು ವಂದನಾರ್ಪಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ 100 ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿದರು.