ಡೆಂಘೀ ಹರಡದಂತೆ ಮುಂಜಾಗ್ರತಾ ಕ್ರಮಕ್ಕೆ ಕೆ.ಆರ್.ಎಸ್. ಪಕ್ಷ ಆಗ್ರಹ
ವಿಜಯಪುರ,ಜು.12: ಜಿಲ್ಲೆಯಲ್ಲಿ ಸೊಳ್ಳೆಗಳ ಅಬ್ಬರದಿಂದ ಡೆಂಘೀ ನಿಯಂತ್ರಣ ಹಾಗೂ ಶುದ್ಧ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಕೆ.ಆರ್.ಎಸ್. ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಸೊಳ್ಳೆಗಳ ಅಬ್ಬರ ಹೆಚ್ಚಾಗಿದ್ದು, ಮಳೆಗಾಲದಲ್ಲಿ ಸೊಳ್ಳೆಗಳ ಸಂಖ್ಯೆ ಏರುತ್ತಿದ್ದು, ಡೆಂಘೀ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತಾಯಿಸಿದರು.
ಜಿಲ್ಲೆಯಲ್ಲಿ ವಿಜಯಪುರ ನಗರ ಸೇರಿದಂತೆ ಎಲ್ಲ ಕಡೆಗಳಲ್ಲಿ ಸೊಳ್ಳೆಗಳ ನಾಶಕ್ಕೆ ಔಷಧಗಳನ್ನು ಸಿಂಪರಣೆ ಮಾಡುವಂತಾಗಬೇಕು. ಇನ್ನು ನೀರಿನ ಗುಣಮಟ್ಟವನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಅಗತ್ಯವಾದ ಸೂಚನೆ ಮತ್ತು ಆರೋಗ್ಯಕ್ಕೆ ಬೇಕಾಗುವ ತುರ್ತು ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ತುರ್ತು ಸಭೆ ಕರೆದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಏಕಕಾಲದಲ್ಲಿ 40 ಕೀಟನಾಶಕ ಯಂತ್ರಗಳು ಕೆಟ್ಟಿದ್ದು ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷತನ ಇದಕ್ಕೆ ಮೂಲ ಕಾರಣವಾಗಿದೆ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕೆ.ಆರ್.ಎಸ್. ಪಕ್ಷದ ನಗರ ಅಧ್ಯಕ್ಷÀ ಅಬ್ದುಲ್‍ಹಮೀದ ಇನಾಮದಾರ, ವಿಕ್ರಮ ವಾಘಮೋರೆ, ದುರ್ಗಪ್ಪ ಬೂದಿಹಾಳ, ಶಾಂತುಗೌಡ ಬೇಡೆವಾಡ ಇದ್ದರು.