ಹಾಸ್ಟೆಲ್ ಮೇಲ್ಚಾವಣಿ ಪದರು ಬಿದ್ದು ವಿದ್ಯಾರ್ಥಿಗಳಿಗೆ ಗಾಯ: ಖಂಡನೆ
ಕಲಬುರಗಿ:ಜು.12:ಅಫಜಲಪೂರ ಪಟ್ಟಣದ ಹೊರವಲಯದಲ್ಲಿರುವ ಹಿಂದುಳಿದ ವರ್ಗಗಳ ಬಾಲಕರ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಏಕಾಏಕಿ ವಸತಿ ನಿಲಯದ ಮೇಲ್ಚಾವಣಿ ಪದರು ಕುಸಿದು ಬಿದ್ದಿರುವ ಘಟನೆಯು ವಿದ್ಯಾರ್ಥಿಗಳಲ್ಲಿ ಮತ್ತು ಪೆÇೀಷಕರಲ್ಲಿ ಭಯದ ವಾತಾವರಣ ಉಂಟು ಮಾಡಿದೆ.
ದೂರದ ಊರುಗಳಿಂದ ವಿದ್ಯಾಭ್ಯಾಸಕ್ಕಾಗಿ ವಸತಿ ನಿಲಯಗಳಲ್ಲಿ ತಮ್ಮ ಮಕ್ಕಳನ್ನು ಬಿಡುತ್ತಾರೆ. ಆದರೆ ಇಲ್ಲಿ ಯಾವುದೇ ರೀತಿಯ ಸರಿಯಾದ ಕಟ್ಟಡದ ವ್ಯವಸ್ಥೆ, ಸೂಕ್ತ ಭದ್ರತೆ ಇಲ್ಲದಿರುವುದು, ವಸತಿ ನಿಲಯದಲ್ಲಿ ತಮ್ಮ ಮಕ್ಕಳನ್ನು ಬಿಡಲು ಪೆÇೀಷಕರು ಹಿಂಜರಿಯುವಂತೆ ಮಾಡಿದೆ. ಜಿಲ್ಲೆಯಾದ್ಯಂತ ನಿರಂತರವಾಗಿ ಇಂತಹ ಘಟನೆಗಳು ನಡೆಯುತ್ತಿರುವ ಕುರಿತು ಸೂಕ್ತ ಕ್ರಮ ಕೈಗೊಂಡು ಶಿಥಿಲ ವ್ಯವಸ್ಥೆಯಲ್ಲಿರುವ ಕಟ್ಟಡಗಳನ್ನು ಧ್ವಂಸಗೊಳಿಸಿ, ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವಂತೆ ಈ ಹಿಂದೇನೆ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯೂ ಎಚ್ಚರಿಕೆ ನೀಡಿದ್ದರೂ ಕೂಡ, ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸದೇ ಇರುವುದು ಅಧಿಕಾರಿಗಳ ಬೆಜವಾಬ್ದಾರಿತನ ಎದ್ದು ಕಾಣುತ್ತಿದೆ. ಈ ವಸತಿ ನಿಲಯದ ಘಟನೆಗೂ ಕೂಡ ಅಧಿಕಾರಿಗಳ ಬೇಜವಾಬ್ದಾರಿತನವೆ ನೇರ ಹೊಣೆಯಾಗಿದೆ.
ಭವಿಷ್ಯದಲ್ಲಿ ಶಿಕ್ಷಣ ಪಡೆದು ಬೆಳೆಯಬೇಕಾದ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡದೇ ಈ ಕೂಡಲೇ ಜಿಲ್ಲೆಯಾದ್ಯಂತ ಶಿಥಿಲ ವ್ಯವಸ್ಥೆಯಲ್ಲಿರುವ ಕಟ್ಟಡಗಳನ್ನು ಧ್ವಂಸಗೊಳಿಸಿ, ಹೊಸ ಕಟ್ಟಡ ನಿರ್ಮಿಸಿ. ಅಲ್ಲಿಯ ವರೆಗೂ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಎಐಡಿಎಸ್ಓ ಕಲಬುರಗಿ ಜಿಲ್ಲಾ ಸಮಿತಿಯು ಅಗ್ರಹಿಸಿದೆ.