ಶಿಕ್ಷಣ ಸಕಲ ಸಮಸ್ಯೆಗೆ ಸಂಜೀವಿನಿ
ಧಾರವಾಡ,ಜು12 : ಶಿಕ್ಷಣವು ಸಕಲ ಸಮಸ್ಯೆಗಳಿಗೆ ಸಂಜೀವಿನಿ. ಶಿಕ್ಷಕರು ವಿದ್ಯಾರ್ಥಿಗಳ ವೈಯಕ್ತಿಕ ಸಮಸ್ಯೆಗಳನ್ನು ಗಮನಿಸಿ ಅವರ ವರ್ತನೆಯಲ್ಲಿ ಪರಿವರ್ತನೆ ತಂದು ಗುಣಮಟ್ಟದ ಶಿಕ್ಷಣವನ್ನು ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಹುಬ್ಬಳ್ಳಿ ಗ್ರಾಮೀಣಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ತಿಳಿಸಿದರು.
ಶಿಕ್ಷಕರು ಕೊರತೆಗಳ ಮಧ್ಯೆಯೂ ಕೊಟ್ಟ ಕೆಲಸವನ್ನು ಪ್ರಾಮಾಣಿಕವಾಗಿ ಬದ್ಧತೆಯಿಂದ ಮಾಡಬೇಕಾಗಿದೆ. ಗುಣಮಟ್ಟದ ಶಿಕ್ಷಣವನ್ನು ನೀಡಲು ಶಿಕ್ಷಕರಷ್ಟೇ ಜವಾಬ್ದಾರಿ ಪಾಲಕರದೂ ಇದೆ. ವಿದ್ಯಾರ್ಥಿಗಳ ಕಲಿಕೆಯಲ್ಲುಂಟಾದ ದೋಷಗಳ ಕ್ಷೇತ್ರಗಳ ರೂಪರೇಷೆಯನ್ನು ಸಿದ್ಧಪಡಿಸಿಕೊಂಡು ಸಮುದಾಯದ ಸಹಭಾಗಿತ್ವದೊಂದಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಹೇಳಿದರು.