ವಿಶ್ವ ಜನಸಂಖ್ಯಾ ದಿನಾಚರಣೆ
ಗುಳೇದಗುಡ್ಡ,ಜು12 : ಜಾಗತಿಕ ಜನಸಂಖ್ಯೆಯ ಪ್ರಮಾಣ ಹೆಚ್ಚುತ್ತಿರುವುದರಿಂದ ಸಾಮಾಜಿಕ, ಆರ್ಥಿಕ, ಪರಿಸರ ನಾಶದಂತಹ ಅನೇಕ ಸಮಸ್ಯೆಗಳು ಕಾಡುತ್ತಿವೆ. ಇಂದು ಹೆಚ್ಚಿರುವ ಜನಸಂಖ್ಯೆ ಮಾನವನಿಗೆ ಒಂದು ಸವಾಲಾಗಿ ಪರಿಣಮಿಸಿದೆ ಎಂದು ತೋಗುಣಶಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಮುಖ್ಯವೈದ್ಯಾಧಿಕಾರಿ ಡಾ.ಲಕ್ಷ್ಮಣ ಸನ್ನೆಲಿ ಹೇಳಿದರು.
ಕೋಟಿಕಲ್ಲ ಗ್ರಾಮದ ಹೊಳೆಹುಚ್ಚೇಶ್ವರ ಮಠದಲ್ಲಿ ತೋಗುಣಶಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬಸವೇಶ್ವರ ವಿದ್ಯಾವರ್ಧಕ ಸಂಘದ ಎಂಬಿಬಿಎಸ್ ವಿದ್ಯಾರ್ಥಿಗಳು ಹಾಗೂ ಗ್ರಾಮದ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಮತ್ತು ಜನಸಂಖ್ಯೆಯ ಬೆಳವಣಿಗೆಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಡಾ. ಭರತಕುಮಾರ ಭಾವಿಕಟ್ಟಿ, ಉಪನ್ಯಾಸಕ ಎಂ. ಎಸ್. ಅಂಗಡಿ, ಆರ್.ಬಿ. ಅಂಬಿಗೇರ, ಅಶೋಕ ಬಡಿಗೇರ, ಪ್ರಾಥಮಿಕ ಆರೋಗ್ಯ ಕೇಂದ್ರ ಎಸ್.ಎಸ್. ಜಾಪಾಳ, ಎನ್.ಕೆ. ಕರಡಿಗುಡ್ಡ, ಎಚ್.ಬಿ. ಪೂಜಾರ, ಎಸ್.ಬಿ. ನೊಟಗಾರ, ದಿವ್ಯಾ ಕೊನಸಾಗರ ಹಾಗೂ ಆಶಾ ಕಾರ್ಯಕರ್ತೆಯರು ವಿದ್ಯಾರ್ಥಿಗಳು ಇದ್ದರು.