ಜಲಜೀವನ್ ಮಿಷನ್ ಯೋಜನೆ ಅಭಿವೃದ್ಧಿ ಪ್ರಗತಿ ಪರಿಶೀಲನೆ ಸಭೆ
ಸಂಜೆವಾಣಿ ವಾರ್ತೆ
ಹನೂರು ಜು 12 :- ತಾಲೂಕಿನಾದ್ಯಂತ ನಡೆಯುತ್ತಿರುವ ಜಲಜೀವನ್ ಮಿಷನ್ ಅಭಿರುದ್ದಿ ಕಾಮಗಾರಿಗಳ ಕುರಿತು ಶಾಸಕ ಎಂ.ಆರ್ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ಸಭೆ ನಡೆಯಿತು.
ಹನೂರು ಪಟ್ಟಣದ ಲೋಕಪಯೋಗಿ ಇಲಾಖೆ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಜಲ ಜೀವನ್ ಮಿಷನ್ ಯೋಜನೆಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಭೆ ನಡೆಸಿ ಅಭಿವೃದ್ಧಿ ಕಾಮಗರಿಗಳ ಬಗ್ಗೆ ಮಾಹಿತಿ ಪಡೆದು, ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಮಂಜುನಾಥ್ ಅವರು ಜಲಜೀವನ್ ಮಿಷನ್ ಕಾಮಗಾರಿಗಳು ನಡೆಯುತ್ತಿದ್ದು, ಹಲವಾರು ಕಡೆ ಶೇ 70 ರಷ್ಟು ನಡೆದಿದ್ದು, ಇನ್ನುಳಿದ ಕಾಮಗಾರಿಗಳು ಗುಣಮಟ್ಟದಿಂದ ಮಾಡಬೇಕು, ಆದಷ್ಟು ಬೇಗ ಉಳಿದ ಕಡೆ ಗುಣಮಟ್ಟದಿಂದ ಕಾಮಗಾರಿ ನಡೆಸಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ತಾಕಿತು ಮಾಡಿದರು.
ಇದೇ ಸಂದರ್ಭದಲ್ಲಿ ಎ.ಇ.ಇ ಹರೀಶ್, ಇಂಜಿನಿಯರ್ ಮಹೇಶ್ ಹಾಗೂ ಅಧಿಕಾರಿಗಳು ಗುತ್ತಿಗೆದಾರರು ಹಾಜರಿದ್ದರು.