ರಾಷ್ಟ್ರಮಟ್ಟದ ಟೇಬಲ್ ಟೆನ್ನಿಸ್‍ಗೆ ಜಿಲ್ಲೆಯ ವಿದ್ಯಾರ್ಥಿ ಗುಣತೇಜ ಆಯ್ಕೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.12-ಮಾದಾಪುರದಲ್ಲಿರುವ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿ ಗುಣತೇಜ ಕೇಂದ್ರೀಯ ವಿದ್ಯಾಲಯ ಸಂಘಟನ್ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಟೇಬಲ್ ಟೆನ್ನಿಸ್‍ನ 19 ವರ್ಷದೊಳಗಿನ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾಲಯದ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಗುಣತೇಜ ಜುಲೈ 9 ಮತ್ತು 10ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿಜೇತನಾಗಿ ಹೊರಹೊಮ್ಮುವುದರ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಈ ಗೌರವಕ್ಕೆ ಪಾತ್ರನಾಗಿದ್ದಾರೆ.
ಗುಣತೇಜ ಮೂಲತಃ ಹರವೆ ಗ್ರಾಮದವರಾದ ವೆಂಕಟಯ್ಯನಛತ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ ಭಾμÁ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಪ್ರಶಾಂತ.ಎಸ್ ಹಾಗೂ ರೇಖಾ. ಕೆ.ಆರ್ ದಂಪತಿಗಳ ಪುತ್ರ.
ಗುಣತೇಜನ ಕಠಿಣ ಪರಿಶ್ರಮ ಸಾಧನೆಗೆ ಕಾರಣವಾಗಿದೆ. ವಿದ್ಯಾಲಯಕ್ಕೆ ಕೀರ್ತಿ ತಂದಿರುವ ಗುಣತೇಜ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿಯೂ ಯಶಸ್ಸುಗಳಿಸಲಿ ಎಂದು ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ದವಿಂದರ್ ಸಿಂಗ್ ಅವರು ಶುಭ ಹಾರೈಸಿದ್ದಾರೆ.