ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ
ಕಲಬುರಗಿ:ಸೆ.27:ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಸೆಪ್ಟೆಂಬರ್ 30 ರಂದು ಸೋಮವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.
ಅಕ್ಟೋಬರ್ 1 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಅಕ್ಟೋಬರ್ 2 ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಏರ್ಪಡಿಸಲಾದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.