ಯಾವುದೇ ಮಕ್ಕಳು ಲಸಿಕೆಯಿಂದ ವಂಚಿತವಾಗದಿರಲಿ ಮಹಾಪೌರ ಮಹೇಜಬಿನ್ ಹೊರ್ತಿ ಅಧಿಕಾರಿಗಳಿಗೆ ಸೂಚನೆ
ಸಂಜೆವಾಣಿ ವಾರ್ತೆ,
ವಿಜಯಪುರ,ಜು.12: ಲಸಿಕೆಯಿಂದ ಯಾವುದೇ ಮಕ್ಕಳು ವಂಚಿತವಾಗದಂತೆ ನೋಡಿಕೊಂಡು ಶಾಲೆಯಿಂದ ಹೊರಗುಳಿದ, ಅಂಗನವಾಡಿ ಕೇಂದ್ರದ ಮಕ್ಕಳು ಸೇರಿದಂತೆ ಪ್ರತಿ ಮನೆ-ಮನೆಗಳ ಮಾಹಿತಿ ಸಂಗ್ರಹಿಸಿ ಯಶಸ್ವಿಯಾಗಿ ಲಸಿಕಾಕರಣ ಹಾಗೂ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಮಹಾನಗರ ಪಾಲಿಕೆ ಮಹಾಪೌರ ಮಹೇಜಬಿನ್ ಹೊರ್ತಿ ಅವರು ಸೂಚಿಸಿದರು.
ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮುಂಜಾಗೃತಾ ಕ್ರಮವಾಗಿ ವಿವಿಧ ಲಸಿಕಾ ಕಾರ್ಯಕ್ರಮಗಳನ್ನು ಆಯೋಜಿಸಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಯನ್ನು ಪಾಲಿಸಿ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಲಸಿಕಾಕರಣ ಮತ್ತು ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುμÁ್ಠನಗೊಳಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಅವರು ಹೇಳಿದರು.
ಪಾಲಿಕೆ ವ್ಯಾಪ್ತಿಯ 35 ವಾರ್ಡಗಳಲ್ಲಿ ಜವಾಬ್ದಾರಿಯುತವಾಗಿ ತಮ್ಮ ವ್ಯಾಪ್ತಿಯ ಸ್ಥಿತಿಗತಿ, ಮಕ್ಕಳ ಜನಸಂಖ್ಯೆ, ಅಂಗನವಾಡಿ ಕೇಂದ್ರಗಳು, ಶಾಲೆಗಳನ್ನು ಗುರುತಿಸಿ ಯಾವುದೇ ಮಕ್ಕಳು ಲಸಿಕಾಕರಣದಿಂದ ಹೊರಗುಳಿಯದಂತೆ ಲಸಿಕೆ ನೀಡಲು ಪ್ರಚಾರ ಹಾಗೂ ಪ್ರತಿ ಮನೆಗಳ ಮಾಹಿತಿಯನ್ನು ಸಂಗ್ರಹಿಸಿ ಆರೋಗ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುμÁ್ಠನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಡಿಪಿಒ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ನಗರದ ಎಲ್ಲಾ ವಾಡ್ರ್Àಗಳ ಮಕ್ಕಳು, ಶಾಲೆಯಿಂದ ಹೊರಗುಳಿದ, ವಲಸೆ ಕಾರ್ಮಿಕರ ಮಕ್ಕಳ ಬಗ್ಗೆ ಮಾಹಿತಿ ಕೂಢೀಕರಿಸಿ ಫ್ರಥಮಾಧ್ಯತೆಯ ಮೇರೆಗೆ ಲಸಿಕೆ ನೀಡುವಂತೆ ಅವರು ಸೂಚನೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಮಾತನಾಡಿ, ನಗರದ 35 ವಾರ್ಡ್‍ಗಳಲ್ಲಿ ಈಗಾಗಲೇ ಸ್ವಚ್ಚತೆಗೆ ಆದÀ್ಯತೆ ನೀಡಲಾಗಿದೆ. ವಿವಿಧ ಹಂತಗಳಲ್ಲಿ ಲಸಿಕೆ ನೀಡುವುದರಿಂದ ಎಲ್ಲಾ ವಾರ್ಡ್‍ಗಳ ಸದಸ್ಯರೊಂದಿಗೆ ಸಭೆ ನಡೆಸಿ ಅವರಿಗೆ ಮಾಹಿತಿ ಒದಗಿಸಲಾಗುವುದು ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳಿ ಮಾತನಾಡಿ, ಈಗಾಗಲೇ ಡೆಂಘೀ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಕ್ಕಳ ಆರೋಗ್ಯ ಸದೃಢತೆಗೆ ಪ್ರಥಮಾಧ್ಯತೆಯ ಮೇರೆಗೆ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಉಪಮಹಾಪೌರÀ ದಿನೇಶ ಹಳ್ಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ಹಾಣ, ಆರೋಗ್ಯಾಧಿಕಾರಿ ಡಾ. ಎಸ್.ಎಲ್. ಲಕ್ಕಣವರ, ಕೆ.ಡಿ. ಗುಂಡಬಾವಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.