ಸರ್ಕಾರಿ ನೌಕರರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದದೈಹಿಕ ಹಾಗೂ ಮಾನಸಿಕ ಸಾಮಾಥ್ರ್ಯ ಹೆಚ್ಚಿಸಲಿದೆ:ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್
ಕಲಬುರಗಿ:ಜು.11:ದೈನಂದಿನ ಕೆಲಸಗಳಲ್ಲಿ ಸರ್ಕಾರಿ ನೌಕರರಿಗೆ ಒತ್ತಡಗಳು ಸಹಜ. ಸರ್ಕಾರಿ ನೌಕರರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಉತ್ಸಾಹ, ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯವನ್ನು ಹೆಚ್ಚಿಸಲಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.
ಅವರು ಗುರುವಾರ ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಲಬುರ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಾಯದಲ್ಲಿ 2023-24ನೇ ಸಾಲಿನ ಕಲಬುರಗಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಿಗೆ ಗುಂಡು ಎಸೆಯುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಏರ್ಪಡಿಸಿದ ಈ ಕ್ರೀಡಾಕೂಟವು ಒಂದು ಒಳ್ಳೆಯ ವೇದಿಕೆಯಾಗಿದ್ದು, ಪ್ರತಿಯೊಬ್ಬ ಸರ್ಕಾರಿ ನೌಕರರು ಈ ಕ್ರೀಡೆಯಲ್ಲಿ ಭಾಗವಹಿಸಬೇಕು.
ಹಿಂದಿನ ವರ್ಷದಲ್ಲಿ ಎಲ್ಲಾ ಇಲಾಖೆಗಳಿಂದ ಉತ್ತಮ ಕೆಲಸಗಳು ಆಗಿರುತ್ತವೆ. ಇತ್ತೀಚಿಗೆ ಮಾನ್ಯ ಮುಖ್ಯಮಂತ್ರಿಗಳ ನಡೆಸಿದ ಪರಿಶೀಲನಾ ಸಭೆಯಲ್ಲಿ ಕಲಬುರಗಿ ಜಿಲ್ಲೆಗೆ ಒಳ್ಳೆಯ ಹೆಸರು ಬಂದಿದ್ದು, ಅದೇ ರೀತಿ ಮುಂದಿನ ವರ್ಷದಲ್ಲಿ ಕಲಬುರಗಿ ಜಿಲ್ಲೆಗೆ ಒಳ್ಳೆಯ ಹೆಸರು ಬರಲು ತಾವು ಶ್ರಮಿಸಬೇಕು ಎಂದರು.
ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಸಮಾರಂಭದಲ್ಲಿ ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಮಪ್ರಭು ಪಾಟೀಲ, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ ಎಸ್., ಕರ್ನಾಟ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜು ಲೇಂಗಟಿ, ಸಂಘದ ಗೌರವಾಧ್ಯಕ್ಷ ಅಬ್ದುಲ್ ಅಜೀಮ್, ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಯ್ಯ ಮಠಪತಿ, ರಾಜ್ಯ ಪರಿಷತ್ ಸದಸ್ಯ ಹಣಮಂತರಾಯ ಗೋಳಸಾರ, ಖಜಾಂಚಿ ಕೆ. ಸತೀಶ ಸಜ್ಜನ್, ಕಾರ್ಯಾಧ್ಯಕ್ಷ ಚಂದ್ರಕಾಂತ ಏರಿ, ಹಿರಿಯ ಉಪಾಧ್ಯಕ್ಷ ಬಾಬು ಮೌರ್ಯ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಚನ್ನಬಸಪ್ಪ ಮುಧೋಳ, ಮಲ್ಲಿನಾಥ ಮಂಗಲಗಿ, ಗುರುಲಿಂಗಪ್ಪ ಪಾಟೀಲ, ಸೇಡಂ ತಾಲೂಕು ಅಧ್ಯಕ್ಷ ಶಿವಶಂಕರಯ್ಯ, ಚಿತ್ತಾಪುರ ತಾಲೂಕು ಅಧ್ಯಕ್ಷ ಬಸವರಾಜ ಬಳೂಂಡಗಿ, ಯಡ್ರಾಮಿ ತಾಲೂಕು ಅಧ್ಯಕ್ಷ ಬಲವಚಿತರಾಯ ಬಿರಾದಾರ, ಜೇವರ್ಗಿ ತಾಲೂಕು ಅಧ್ಯಕ್ಷ ಗುಡುಲಾಲ್ ಶೇಖ, ಚಿಂಚೋಳಿ ಅಧ್ಯಕ್ಷ ದೇವೀಂದ್ರಪ್ಪ ಹೊಳ್ಕರ್, ಕಮಲಾಪೂರ ತಾಲೂಕು ಅಧ್ಯಕ್ಷ ಮಿಟ್ಟುಸಾಬ್ ಮುಲ್ಲಾ, ಆಳಂದ ತಾಲೂಕು ಅಧ್ಯಕ್ಷ ಮಹಾಂತೇಶ ಪಾಟೀಲ, ಕಾಳಗಿ ತಾಲೂಕು ಅಧ್ಯಕ್ಷ ಶರಣಗೌಡ ಪಾಟೀಲ, ಶಹಾಬಾದ ತಾಲೂಕು ಅಧ್ಯಕ್ಷ ಈರಣ್ಣ ಕೆ. ಕೆಂಭಾವಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸುರೇಶ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.