ಕಲಬುರಗಿ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಅಭಿವೃದ್ಧಿಗೆ ಭರವಸೆ :ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ
ಕಲಬುರಗಿ:ಜು.11:ಕಲಬುರಗಿ ನಗರದ ಏಕೈಕ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇದಾಗಿದ್ದು, ಈ ಕಾಲೇಜಿನಲ್ಲಿ ಬಡ ವಿದ್ಯಾರ್ಥಿನಿಯರು ಅಧ್ಯಯನ ಮಾಡುತ್ತಿದ್ದು, ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯ ಒದಗಿಸುವುದಾಗಿ ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ಅವರು ವಿದ್ಯಾರ್ಥಿನಿಯರಿಗೆ ಭರವಸೆ ನೀಡಿದರು.
ಅವರು ಇತ್ತೀಚೆಗೆ ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೆಚ್ಚುವರಿ ತರಗತಿ ಕೋಣೆಗಳನ್ನು ಉದ್ಘಾಟಿಸಿ ಮಾತನಾಡಿ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಲು ಪಣತೊಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಅವರು ಮಾತನಾಡಿ ಈ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುÀದಾಗಿ ಭರವಸೆ ನೀಡಿದರು.
ವೇದಿಕೆಮೇಲೆ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಶಿವಶರಣ ಗೊಳ್ಳೆ, ವಿಧಾನ ಪರಿಷತ್ ಶಾಸಕ ಜಗದೇವ ಗುತ್ತೇದಾರ್, ಮಾಜಿ ಮೇಯರ್ ಬಾಬು ಒಂಟಿ, ರೈಟ್ಸ್ ಸಂಸ್ಥೆಯ ಅಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರಾದ ಡಾ. ಮೋರಗೆ ಪ್ರಕಾಶ, ಕಾಲೇಜಿನ ಬೋಧಕ, ಭೋದಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಡಾ. ಮಲ್ಲಿರ್ಕಾಜುನ ಶೆಟ್ಟಿ ಸ್ವಾಗತಿಸಿದರು. ಸಾಂಸ್ಕøತಿಕ ಕಾರ್ಯದರ್ಶಿ ಡಾ. ಜೋತಿ ಕೆ.ಎಸ್. ಕಾರ್ಯಕ್ರಮ ನಿರೂಪಿಸಿ, ಡಾ. ವಿದ್ಯಾ ಜೋಶಿ ಕೊನೆಯಲ್ಲಿ ವಂದಿಸಿದರು.