ಡೆಂಗ್ಯೂ ಹಾಗೂ ಚಿಕನ್‍ಗುನ್ಯ ಪ್ರಕರಣ ಹೆಚ್ಚಾಗುತ್ತಿದ್ದು, ನಿಯಂತ್ರಿಸಲು ಅಧಿಕಾರಿಗಳಿಗೆ ಸೂಚನೆ:ಸಿ.ಇ.ಓ. ಭಂವರ್ ಸಿಂಗ್ ಮೀನಾ
ಕಲಬುರಗಿ:ಜು.11: ಜಿಲ್ಲೆಯಲ್ಲಿ ಡೆಂಗ್ಯು ಹಾಗೂ ಚಿಕ್‍ಗುನ್ಯ ಪ್ರಕರಣ ಹೆಚ್ಚಾಗುತ್ತಿದ್ದು ಎಲ್ಲ ಅಧಿಕಾರಿಗಳುಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿ ಇದ್ದು ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡುವುದು ಹಾಗೂ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಠಾನಗೋಳಿಸಿ ಮಾನವ ದಿನ ಸೃಜನೆ ಮಾಡಲು ತಿಳಿಸಿದರು, ನಂತರ ಸಮಗ್ರ ಶಾಲಾ ಅಭಿವೃಧ್ದಿ ಅಡಿಯಲ್ಲಿ ಶಾಲಾ ಶೌಚಾಲಯ, ಶಾಲಾ ಆವರಣ ಗೋಡೆ ಹಾಗೂ ಶಾಲಾ ಅಡುಗೆ ಕೋಣೆ ಕಾಮಗಾರಿಗಳನ್ನು ತೆಗೆದುಕೊಂಡು ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಚ್ಚ ಭಾರತ ಮಿಷನ್ ಅಡಿಯಲ್ಲಿ ವೈಯಕ್ತಿಕ, ಸಮುದಾಯ ಶೌಚಾಲಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ವಿವಿಧ ವಸತಿ ಯೋಜನೆಯಡಿಯಲ್ಲಿ ನಿಗಡಿಪಡಿಸಿದ ಗುರಿ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಿ ಪ್ರಗತಿ ಸಾಧಿಸಲು ತಿಳಿಸಿದರು.
ಜನಸ್ಪಂದನ, ಐಪಿಜಿಆರ್‍ಎಸ್, ಪಬ್ಲಿಕ್ ಗ್ರೇವಿಯನ್ಸ್ ಗಳಲ್ಲಿ ದಾಖಲಾದ ದೂರುಗಳನ್ನು ತ್ವರಿತವಾಗಿ ಗುಣಾತ್ಮಕವಾಗಿ ವೀಲೆವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು
ಜಿಲ್ಲೆಯ ಎಲ್ಲಾ ಪಂಚಾಯತ ಅಭಿವೃಧ್ದಿ ಅಧಿಕಾರಿಗಳು ಕೇಂದ್ರಸ್ಥಾನಸಲ್ಲೆ ಇದ್ದು ಗ್ರಾಮ ಪಂಚಾಯತಗಳಲ್ಲಿ ತಮ್ಮ ಹಾಗೂ ಅಧೀನದ ಸಿಬ್ಬಂದಿಗಳ ಹಾಜರಾತಿಯನ್ನು ಕಡ್ಡಾಯವಾಗಿ ಇ-ಹಾಜರಾತಿಯಲ್ಲಿ ಅನುಷ್ಠಾನಗೊಳಿಸಲು ಸೂಚಿಸಲಾಯಿತು ಎಂದು ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯೋಜನಾ ನಿರ್ದೇಶಕರಾದ ಜಗದೇವಪ್ಪ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.