ಸರ್ಕಾರದ ಅವಧಿ ಇರುವವರೆಗೂ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುತ್ತವೆ: ಸಚಿವ ಶರಣಬಸಪ್ಪ ದರ್ಶನಾಪೂರ
ಯಾದಗಿರಿ : ಜು.11 : ಸರ್ಕಾರದ ಅವಧಿ ಇರುವವರೆಗೂ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುತ್ತವೆ. ಜಿಲ್ಲೆಗೆ ಹೆಚ್ಚಿನ ಅನುದಾನ ತರುವ ಮುಖಾಂತರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಹೇಳಿದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಸನಗೌಡ ಮಾಲಿ ಪಾಟೀಲ್ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ನಾಗನಗೌಡ ಸುಬೇದಾರ, ಜಿ.ತಾಲೂಕು ಪಂಚಾಯಿತಿ ಸದಸ್ಯರಾದ ಚಂದಪ್ಪ ಸೇರಿ, ಮಾಜಿ ಎಪಿಎಂಸಿ ಸದಸ್ಯರ ಬಸವರಾಜ ಕನಗೊಂಡ ತಿರುಪತಿ ಯುವ ಮುಖಂಡರಾದ ತಿರುಪತಿ ಸೇರಿ, ಸೇರಿದಂತೆ ಹಲವಾರು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.