ವಿಶ್ವ ಜನಸಂಖ್ಯಾ ದಿನಾಚರಣೆ: ಜಾಗೃತಿ ಜಾಥಾ
ಕಲಬುರಗಿ,ಜು.11-ನಗರದ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರತಿಕಾಂತ ವ್ಹಿ ಸ್ವಾಮಿ, ಡಾ.ಎ.ಎಸ್ ರುದ್ರವಾಡಿ, ಡಾ.ಶರಣಬಸಪ್ಪ ಗಣಜ¯ಖೇಡ, ಡಾ.ಶರಣಬಸಪ್ಪ ಕ್ಯಾತನಾಳ, ಜಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ.ಉಮೇಶ್ ಆರ್. ರೆಡ್ಡಿ, ಜಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಡಾ.ಓಂಪ್ರಕಾಶ ಅಂಬುರೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶರಣಪ್ಪ ಎಂ.ಡಿ., ಜಿಲ್ಲಾ ಕಾಲರ ನಿಯಂತ್ರಣಾಧಿಕಾರಿ ಡಾ.ವಿವೇಕಾನಂದ ರೆಡ್ಡಿ, ಡಿಎಲ್‍ಓ. ಡಾ.ರಾಜಕುಮಾರ ಕುಲಕರ್ಣಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಾರುತಿ ಕಾಂಬಳೆ, ಡಾ.ವಿನೋದ ಕುಮಾರ್, ಎಂ.ಡಿ.ಇರ್ಫಾನ್, ಸುನೀಲ್ ದತ್ತ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸೋಮು ರಾಠೋಡ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನಸಿರ್ಂಗ್ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಜಾಥಾದಲ್ಲಿ ಭಾಗವಹಿಸಿದ್ದರು.