ಕಾಮಗೆರೆ: ರೇಷ್ಮೆ ಕಾರ್ಖಾನೆಯ ಕೂಲಿ ಕಾರ್ಮಿಕರಿಗೆ ಕ್ಷಯರೋಗ ಆರೋಗ್ಯ ತಪಾಸಣೆ
ಸಂಜೆವಾಣಿ ವಾರ್ತೆ
ಕೊಳ್ಳೆಗಾಲ ಜು 11 :- ತಾಲ್ಲೂಕಿನ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕಾಮಗೆರೆ ಹೊಸ ಬಡಾವಣೆಯಲ್ಲಿ ಇರುವ ಉಪ ಕೇಂದ್ರದಲ್ಲಿ ಕಾರ್ಮಿಕರಿಗೆ ಕ್ಷಯರೋಗ, ಎನ್.ಸಿ.ಡಿ ಹಾಗೂ ಹೆಚ್.ಐ.ವಿ. ತಪಾಸಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾಮಗೆರೆ ಉಪ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ರೇಷ್ಮೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ನಡೆಸಿ. ಸ್ಥಳದಲ್ಲೇ ಎಕ್ಸ್ ರೇ ಮಾಡಿ ಕ್ಷಯರೋಗ, ಎನ್.ಸಿ.ಡಿ ಹಾಗೂ ಹೆಚ್.ಐ.ವಿ. ತಪಾಸಣೆ ಮಾಡಲಾಯಿತು.
ಆರೋಗ್ಯ ತಪಾಸಣೆಯಲ್ಲಿ ರೇಷ್ಮೆ ಕಾರ್ಖಾನೆಯಲ್ಲಿ ಕೆಲಸ ಮಾಡುವ ಸುಮಾರು 85 ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ನಡೆಸಿ. ಅದರಲ್ಲಿ 71 ಜನರಿಗೆ ಎಕ್ಸ್ ರೇ ಮಾಡಿ ವರದಿ ನೀಡಿ. ಕಫ ಪರೀಕ್ಷೆ, ರಕ್ತ ಪರೀಕ್ಷೆ ಮಾಡಲಾಯಿತು. ಹಾಗೂ ಪ್ರತಿಯೋಬ್ಬರಿಗೂ ಆರೋಗ್ಯದ ಬಗ್ಗೆ ಜಾಗೃತರಾಗಲು ಸಲಹೆಗಳನ್ನು ನೀಡಲಾಗಿದೆ.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ರವಿ ಕುಮಾರ್ ಎಂ.ಎಸ್ ಅವರು ಮಾತನಾಡಿ ಕ್ಷಯರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಹೆಚ್ಚಾಗಿ ರೇಷ್ಮೆ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಕ್ಷಯರೋಗ ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ರೇಷ್ಮೆ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತಿದೆ.
ರೇಷ್ಮೆ ಕಾರ್ಖಾನೆಯಲ್ಲಿ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರು ಆರೋಗ್ಯದ ಬಗ್ಗೆ ಜಾಗೃತರಾಗಿ ಸುರಕ್ಷಿತ ರಾಗಿರಲು ಮುಂಜಾಗ್ರತ ಕ್ರಮಗಳನ್ನು ಅನುಸರಿಸಬೇಕು. ಯಾವುದೇ ಸಾಂಕ್ರಾಮಿಕ ರೋಗ ರುಜಿನಗಳು ಹಾರಡದಂತೆ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಆರೋಗ್ಯದ ಸಮಸ್ಯೆ ಕಂಡುಬಂದಲ್ಲಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ಕ್ಷಯರೋಗ ಹರಡದಂತೆ ಜಾಗೃತರಾಗಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ಮೇಲ್ವಿಚಾರಣಾಧಿಕಾರಿ ಶೇಖರ್, ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ಪ್ರಸಾದ್, ಐ.ಸಿ.ಟಿ.ಸಿ ಪ್ರಯೋಗಶಾಲಾ ತಂತ್ರಜ್ಞರು ಡಯಾನ ಸುಧಾ ಹಾಗೂ ಕಾಮಗೆರೆ ಪಿ.ಎಚ್.ಸಿ.ಒ.ಎಸ್ ಮತ್ತು ಆಶಾ ಕಾರ್ಯಕರ್ತೆಯರಾದ ಸುಜಾತಾ, ಮಮತಾ, ಚೆನ್ನಾಚಮ್ಮ, ಲಾವಣ್ಯ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.