ಡೆಂಗ್ಯೂ ರೋಗ ತಡೆಗಟ್ಟಲು ಸಿದ್ಧರಾಗಿ: ಡಾ.ಸಂಜೀವಕುಮಾರ ಪಾಟೀಲ್
ಸೇಡಂ, ಜು,11: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ರೋಗವು ಹೆಚ್ಚಾಗಿದ್ದು ಮುಂಜಾಗ್ರತೆ ಕ್ರಮವಾಗಿ ರೋಗ ನಿಯಂತ್ರಣಕ್ಕೆ ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ತಡೆಗಟ್ಟಲು ಸಿದ್ಧರಾಗಿ ಎಂದು ತಾಲೂಕ ಆರೋಗ್ಯ ಅಧಿಕಾರಿಗಳಾದ ಡಾ. ಸಂಜೀವಕುಮಾರ್ ಪಾಟೀಲ್ ಹೇಳಿದರು.
ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಅಯೋಜಿಸಲಾಗಿದೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಕಾಲರಾ ನಿಯಂತ್ರಣ ಅಧಿಕಾರಿಗಳಾದ ಡಾ. ವಿವೇಕಾನಂದ ರೆಡ್ಡಿ ಸಭೆ ಉದ್ದೇಶಿಸಿ ಮಾತನಾಡಿದ ಅವರು ಡೆಂಗ್ಯೂ ಮಹಾಮಾರಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ತಾಲೂಕಿನ ಎಲ್ಲಾ ವಾದ್ಯಾಧಿಕಾರಿಗಳಿಗೆ ಮತ್ತು ಆರೋಗ್ಯ ಇಲಾಖೆಯ ಎಲ್ಲ ಸಿಬ್ಬಂದಿಗಳಿಗೆ ಸೂಚಿಸಿದರು. ಈ ವೇಳೆಯಲ್ಲಿ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ. ನಾಗರಾಜ ಮನ್ನೆ ತಾಲೂಕ ಆರೋಗ್ಯ ನಿರೀಕ್ಷಣ ಅಧಿಕಾರಿಗಳಾದ ಶಿವಯೋಗಿ ಸಕ್ಪಲ್ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಳಾದ ಕುಮಾರಿ ಪ್ರೀತಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣ ಅಧಿಕಾರಿಗಳಾದ ಶ್ರೀಮತಿ ಶಕುಂತಲಾ, ಪ್ರಾಥಮಿಕ ಆರೋಗ್ಯ ಸುರಕ್ಷಣ ಅಧಿಕಾರಿಗಳಾದ ಶ್ರೀಮತಿ ಜ್ಯೋತಿ ಲಿಂಗಂಪಲ್ಲಿ, ಹಾಗೂ ಆರೋಗ್ಯ ಇಲಾಖೆಯ ಎಲ್ಲ ವೈದ್ಯಾಧಿಕಾರಿಗಳು ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ನಿರೀಕ್ಷಣ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಸುರಕ್ಷಣ ಅಧಿಕಾರಿಗಳು ಇದ್ದರು.