ಗುವಿವಿ :ಪ್ರೊ. ರಾಜನಾಳ್ಕರ್ ಲಕ್ಷ್ಮಣ ತಾತ್ಕಾಲಿಕ ಕುಲಸಚಿವ
ಕಲಬುರಗಿ :ಜು.10: ಗುಲಬರ್ಗಾ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ತಾತ್ಕಾಲಿಕ ಕುಲಸಚಿವರಾಗಿ ವಾಣಿಜ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಂಡಳಿ ವಿಭಾಗದ ನಿರ್ದೇಶಕ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರನ್ನು ನೇಮಿಸಲಾಗಿದೆ.
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರು ಅವರನ್ನು ರಾಜ್ಯ ಸರ್ಕಾರ ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ದಂಡಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಗುಲಬರ್ಗಾ ವಿವಿಯ ಕುಲಸಚಿವ ಹುದ್ದೆಗೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ ಅನುಸಾರ ಪದತ್ತ ಅಧಿಕಾರದನ್ವಯ ರಾಜ್ಯ ಸರ್ಕಾರ ನೂತನ ಕುಲಸಚಿವರನ್ನು ನೇಮಿಸುವವರೆಗೆ ಪ್ರೊ. ರಾಜನಾಳ್ಕರ್ ಲಕ್ಷ್ಮಣ ತಾತ್ಕಾಲಿಕ ಕುಲಸಚಿವರಾಗಿ ಕಾರ್ಯ ನಿರ್ವಹಿಸಲು ಕುಲಪತಿ ಪ್ರೊ. ದಯಾನಂದ ಅಗಸರ ಅದೇಶಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.