ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ
ಕಲಬುರಗಿ:ಜು.10: ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಡಪದ ಅಪ್ಪಣ ಜಯಂತಿಯನ್ನು ಆಚರಿಸಲು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಹಡಪದ ಅಪ್ಪಣ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಡಾ.ಎಸ್. ಪಂಡಿತ್ ರಂಗಮಂದಿರದಲ್ಲಿ ಜುಲೈ 21 ರಂದು ಮಧ್ಯಾಹ್ನ 1 ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿದರು.
ಸರಕಾರಿ ಅರೆಸರ್ಕಾರಿ ಎಲ್ಲ ಸರಕಾರಿ ಕಛೇರಿ ಮತ್ತು ಇಲಾಖೆಗಳು ಅನುದಾನ ಶಾಲಾ ಕಾಲೇಜ್‍ಗಳಲ್ಲಿ ಕಡ್ಡಾಯವಾಗಿ ಬೆಳಿಗ್ಗೆ 9 ಗಂಟೆಗೆ ಆಚರಿಸಲು ತಿಳಿಸಿದರು.
ಭಾವಚಿತ್ರಿಕ್ಕೆ ಮಾಲಾರ್ಪಣೆ ಹೂದಾನಿಗಳಿಂದ ಆಲಂಕರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ . ಕುಡಿಯುವ ನೀರಿನ ಹಾಗೂ ಸ್ವಚ್ಪತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಮಾತನಾಡಿ, ನಾಡಗೀತೆ ಸಂಗೀತ ಕಾರ್ಯಕ್ರಮ ಹಾಗೂ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗುವುದು ಎಂದರು.
ಸಮಾಜದ ಮುಖಂಡರು ಒಬ್ಬ ನುರಿತ ಉಪನ್ಯಾಸಕರನ್ನು ಕರೆತರಲು ಒಬ್ಬ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷರನ್ನು ನೇಮಿಸಬೇಕೆಂದರು.
ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಠಾಚಾರದ ತಹಶೀಲ್ದಾರ ಪಂಪಯ್ಯ, ಜಿಲ್ಲಾ ಅಧ್ಯಕ್ಷ ಈರಣ್ಣ ಸಮಾಜದ ಮುಖಂಡರು ಭಾಗವಹಿಸಿದ್ದರು.