ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ವಿರುದ್ಧ ಕ್ರಮಕ್ಕೆ ಆಗ್ರಹ
ಕಲಬುರಗಿ,ಜು.10-ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಮತ್ತು ಮ್ಯಾನ್ ಸ್ವಿಸ್ ಪವರ್ ಏಜೆನ್ಸಿ ಮೇಲೆ ಶಿಸ್ತುಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಮುಂದೆ ಇಂದು ಧರಣಿ ಸತ್ಯಾಗ್ರಹ ನಡೆಸಲಾಯಿತು.
ಸಂಘದ ಜಿಲ್ಲಾ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಉಪಾಧ್ಯಕ್ಷ ಮೇಘರಾಜ ಕಠಾರೆ, ಕಾರ್ಯದರ್ಶಿ ಬಸಪ್ಪ ನಡುವಿನಕೇರಿ, ಸಿದ್ದರಾಮ ಹರವಾಳ, ನಾಗರತ್ನ ಮದನಕರ, ಬಾಬು ಹೊಸಮನಿ, ನಿಂಗಬಸಪ್ಪ ಅವರಳ್ಳಿ, ಮಲ್ಲಮ್ಮ ಕೋಡ್ಲಿ, ಜಗದೇವಿ ಚಂದನಕೇರಾ, ಗುರುನಂಜೇಶ ಕೋಣಿನ್ ಸೇರಿದಂತೆ ಮತ್ತಿತರರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.
ಸಮಾಜ ಕಲ್ಯಾಣ ಇಲಾಖೆಯ ನೌಕರರು ಬ್ಯಾಂಕ್ ಸ್ಟೇಟ್‍ಮೆಂಟ್ ಸಮೇತ ಕೊಟ್ಟ ಅರ್ಜಿಗಳನ್ನು ತನಿಖೆ ನಡೆಸಿ ಆದ ಅನ್ಯಾಯ ಸರಿಪಡಿಸಬೇಕು, ಹಿಂದುಳಿದ ವರ್ಗಗಳ ವಸತಿ ನಿಲಯ ನೌಕರರ5-6 ತಿಂಗಳ ಬಾಕಿ ವೇತನ ಪಾವತಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಧರಣಿ ಸತ್ಯಾಗ್ರಹದ ನಂತರ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.