ಭೀಕರ ರಸ್ತೆ ಅಪಘಾತ: ಇಬ್ಬರ ಸಾವು
ವಿಜಯಪುರ :ಜು.10:ಬೈಕ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಇಂಡಿ ತಾಲ್ಲೂಕಿನ ರೂಗಿ ಕ್ರಾಸ್ ಬಳಿಯ ಸುಲಗಮ್ಮದೇವಿ ಮಠದ ಹತ್ತಿರ ನಡೆದಿದೆ.
ನಾಗೇಶ ನಾವಿ (27), ಸಿದ್ದು ಬಿರಾದಾರ (37) ಮೃತಪಟ್ಟಿರುವ ದುರ್ದೈವಿಗಳು.
ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಪೌಂಡ್‍ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ
ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದಾರೆ.
ಮೃತಪಟ್ಟಿರುವ ಶವಗಳನ್ನು ಇಂಡಿ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.
ಇಂಡಿ ಗ್ರಾಮೀಣ ಪೆÇಲೀಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.