ಒತ್ತಡಮುಕ್ತ ಜೀವನ ನಡೆಸುವ ಮಾರ್ಗೋಪಾಯದಲ್ಲಿ ನಡೆಯಿರಿ
ಸಂಜೆವಾಣಿ ವಾರ್ತೆ
 ದಾವಣಗೆರೆ ಜು.10; ಇತ್ತೀಚಿನ ದಿನದಲ್ಲಿ ಒತ್ತಡದ ಜೀವನದಿಂದ ಮಾನಸಿಕ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಒತ್ತಡ ಮುಕ್ತ ಜೀವನವನ್ನು ನಡೆಸುವ ಮಾರ್ಗೋಪಾಯಗಳನ್ನು ತಿಳಿದುಕೊಂಡು ಮುನ್ನಡೆದರೆ ಮಾತ್ರ ಪ್ರತಿಯೊಬ್ಬರೂ ಮಾನಸಿಕ ಆರೋಗ್ಯವಂತರಾಗಿರಲು ಸಾಧ್ಯ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೇವರಾಜ್ ಪಟಗೆ ತಿಳಿಸಿದರು.ಅವರು  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವತಿಯಿಂದ ನಗರದ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ  ನಗರ ಪ್ರದೇಶದ ವ್ಯಾಪ್ತಿಗೆ ಬರುವ ಆಶಾ ಕಾರ್ಯಕರ್ತೆಯರಿಗೆ ಮಾನಸಿಕ ಆರೋಗ್ಯದ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಮಾನಸಿಕ ಆರೋಗ್ಯ ಕೇಂದ್ರದ ಪೆÇೀಸ್ಟರ್  ಬಿಡುಗಡೆ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿ ದರು.ಯಾರಲ್ಲಿ ಮಾನಸಿಕ ಕಿರಿಕಿರಿ, ನಿವೇದನೆ, ಚಿಂತೆ, ವ್ಯಥೆ, ನಕಾರಾತ್ಮಕ ಆಲೋಚನೆ, ಇರುತ್ತದೆಯೋ ಅಂಥವರು ಮಾನಸಿಕ ಆರೋಗ್ಯ ಸಹಾಯವಾಣಿ 14416 ಗೆ ಕರೆ ಮಾಡಿ ಆಪ್ತ ಸಮಾಲೋಚನೆ ಪಡೆಯಬಹುದಾಗಿದೆ. ಹಾಗೂ ಪ್ರತಿಯೊಂದು ಸರ್ವೇಯಲ್ಲಿ ಮಾನಸಿಕ ಅಸ್ವಸ್ಥರನ್ನು ಗುರುತಿಸುವ ಕೆಲಸವಾಗಲಿ ಮತ್ತು ಮಾನಸಿಕ ಅಸ್ವಸ್ಥರನ್ನು ಮುಖ್ಯವಾಹಿನಿಗೆ ತರುವಲ್ಲಿ ಆಶಾಕಾರ್ಯಕರ್ತೆಯರ ಪಾತ್ರ ಮುಖ್ಯ ಎಂದರು.