ಜು.೧೩ ರಂದು ಜಿ.ಎಂ ಎಸ್ ಜನ್ಮದಿನಾಚರಣೆ
ಸಂಜೆವಾಣಿ ವಾರ್ತೆ
ದಾವಣಗೆರೆ. ಜು.೯: ಜಿ.ಎಂ. ಸಿದ್ದೇಶ್ವರ್ ಅಭಿಮಾನಿ ಬಳಗದಿಂದ ಮಾಜಿ  ಸಂಸದ ಜಿ.ಎಂ. ಸಿದ್ದೇಶ್ವರ್ ಅವರ ಹುಟ್ಟುಹಬ್ಬ ಸಮಾರಂಭವನ್ನು  ಜು. 13 ರಂದು ಬೆಳಗ್ಗೆ 10.30 ಕ್ಕೆ ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳಗದ ವತಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯಕ್ರಮ ಆಯೋಜಿಸುತ್ತಿದ್ದು,  ಸಮಾರಂಭದಲ್ಲಿ ಅಂಧ ಮಕ್ಕಳು ಭಾಗವಹಿಸಿ, ಕೇಕ್ ಕತ್ತರಿಸುವ ಮೂಲಕ ಶುಭ ಕೋರಲಿದ್ದಾರೆ. ಮಕ್ಕಳಿಗೆ ಭೋಜನ ವ್ಯವಸ್ಥೆಯನ್ನು ಕೂಡ ಮಾಡಲಾಗುತ್ತಿದೆ. ರಾಜ್ಯ ಮಟ್ಟದ ಬಿಜೆಪಿ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿದ್ದೇವೆ ಎಂದರು.ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಮಾತನಾಡಿ, ಜಿ.ಎಂ. ಸಿದ್ದೇಶ್ವರ್ ಅವರು ಮಧ್ಯಕರ್ನಾಟಕದ ಪ್ರಭಾವಿ ನಾಯಕರಾಗಿದ್ದು,  ಅವರ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದೆ. ಸ್ಮಾರ್ಟ್ ಸಿಟಿ ಯೋಜನೆ ತಂದವರು ಅವರು. ಎಲ್ಲ ವಿಧಾನಸಭಾ ಕ್ಷೇತ್ರದಿಂದ ಮುಖಂಡರು, ಕಾರ್ಯಕರ್ತರು ಹುಟ್ಟುಹಬ್ಬಕ್ಕೆ ಆಗ್ರಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಕ್ಷೇತ್ರದ ಮಾಜಿ ಶಾಸಕರು, ಪದಾಧಿಕಾರಿಗಳು ಸೇರಿದಂತೆ ಬೂತ್ ಮಟ್ಟದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ, ಮುಖಂಡರಾದ ಬಿ.ಎಸ್. ಜಗದೀಶ್, ಕೊಳೇನಳ್ಳಿ ಸತೀಶ್, ನೆಲಹೊನ್ನೆ ದೇವರಾಜ್, ರಾಕೇಶ್ ಭಜರಂಗಿ, ಟಿಂಕರ್ ಮಂಜಣ್ಣ, ರಾಜು ನೀಲಗುಂದ ಉಪಸ್ಥಿತರಿದ್ದರು.