ಜು. 13 ಹಾಗೂ 14 ರಂದು ಸಾಮಾನ್ಯ ಸಾಮಥ್ರ್ಯ ಪರೀಕ್ಷೆ
ಕಲಬುರಗಿ:ಜು.09:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೇಮಕಾತಿ ಜಾಹೀರಾತು ಸಂಖ್ಯೆ:01/2022 ಮತ್ತು ಸಂಖ್ಯೆ: 02/2022 ದಿನಾಂಕ:17.08.2022 ಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕರ್ನಾಟಕ ಪರಿಕ್ಷಾ ಪ್ರಾಧಿಕಾರವು 2024ರ ಜುಲೈ 13 ಹಾಗೂ 14 ರಂದು ರಾಜ್ಯದ ವಿವಿದ ಜಿಲ್ಲಾ ಕೇಂದ್ರಗಳಲ್ಲಿ ಸಾಮಾನ್ಯ ಸಾಮಥ್ರ್ಯ ಪರೀಕ್ಷೆಯನ್ನು ನಡೆಸುತ್ತಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವೆಬ್ಸೈಟ್ ಗೆ ಭೇಟಿ ನೀಡಿ ಪರೀಕ್ಷಾ ಪ್ರವೇಶ ಪತ್ರವನ್ನು (Hall ticket) ಡೌನ್‍ಲೋಡ್ ಮಾಡಿಕೊಂಡು ತಪ್ಪದೇ ಪರೀಕ್ಷೆಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.