ರಾಜ್ಯದ ಸಣ್ಣ ಕೈಗಾರಿಕೆ ಸಚಿವರ ಪ್ರವಾಸ
ಕಲಬುರಗಿ:ಜು.09:ರಾಜ್ಯದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಇದೇ ಜುಲೈ 10 ರಂದು ಕಲಬುರಗಿಯಿಂದ ಯಾದಗಿರಿಗೆ ಪ್ರಯಾಣಿಸಿ, ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸಂಜೆ 6.30 ಗಂಟೆಗೆ ಮರಳಿ ಕಲಬುರರಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜುಲೈ 11, 12 ಹಾಗೂ 13 ರಂದು ಯಾದಗಿರಿ ಜಿಲ್ಲೆಯಲ್ಲಿ ನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜುಲೈ 14 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕಲಬುರಗಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಜುಲೈ 15 ರಂದು ಬೆಳಿಗ್ಗೆ 9.45 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.