ರಸ್ತೆ ಅಪಘಾತ: ಇಬ್ಬರು ಸಾವು
ವಿಜಯಪುರ,ಜು.9: ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ
ಸ್ಥಳದಲ್ಲೆ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಮಾರ್ಗ ಮಧ್ಯದಲ್ಲಿ ನಡೆದಿದೆ.
ಮಲ್ಲು ಡೋಲಗೊಂಡ (32), ಪರಶು ಮಿಣಜಿಗಿ(26) ಸ್ಥಳದಲ್ಲೆ ಅಸುನೀಗಿದ್ದಾರೆ.
ರಸ್ತೆಯ ಡಿವೈಡರಿಗೆ ಶಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬನ ಸ್ಥಿತಿ ಗಂಭೀರವಾಗಿದೆ. ಎಲ್ಲರೂ ಮೂಲತಃ ಇಂಗಳೇಶ್ವರ ಗ್ರಾಮದವರು. ರೇವಣಸಿದ್ದ ಶೇಕಣ್ಣಿ (27) ಸ್ಥಿತಿ ಗಂಭೀರವಾಗಿದೆ. ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸವನಬಾಗೇವಾಡಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.