ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ
ಕಲಬುರಗಿ:ಜು.09.ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜುಲೈ 10 ರಂದು ಬುಧವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಮಧ್ಯಾಹ್ನ 12 ಗಂಟೆಗೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್‍ದಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಸೇಡಂ ವೀರಶೈವ ಕಲ್ಯಾಣ ಮಂಟದಲ್ಲಿ ಕಲಬುರಗಿ ಲೋಕಸಭಾ ಸದಸ್ಯರಿಗೆ ಏರ್ಪಡಿಸಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ರಾತ್ರಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜುಲೈ 11 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಜಯದೇವ ಆಸ್ಪತ್ರೆ ಭೇಟಿ ನೀಡುವರು. ಮಧ್ಯಾಹ್ನ 12 ಗಂಟೆಗೆ ಕಲಬುರಗಿ ವೀರಶೈವ ಕಲ್ಯಾಣ ಮಂಟಪದಲ್ಲಿ ಕಲಬುರಗಿ ಲೋಕಸಭಾ ಸದಸ್ಯರಿಗೆ ಏರ್ಪಡಿಸಲಾದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಸೇಡಂ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೇಡಂ ತಾಲೂಕು ಮಟ್ಟದÀ ಕೆ.ಡಿ.ಪಿ. ಸಭೆಯಲ್ಲಿ ಭಾಗವಹಿಸಿ ನಂತರ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜುಲೈ 12 ರಂದು ಬೆಳಿಗ್ಗೆ 11 ಗಂಟೆಗೆ ಅಫಜಲಪುರದ ಸರಸಂಬ ಕಲ್ಯಾಣ ಮಂಟಪ ಹಾಗೂ ಸಂಜೆ 4 ಗಂಟೆಗೆ ಜೇವರ್ಗಿ ಪಟ್ಟಣದಲ್ಲಿ ಕಲಬುರಗಿ ಲೋಕಸಭಾ ಸದಸ್ಯರಿಗೆ ಏರ್ಪಡಿಸಲಾದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.