ಸಕಲ ಜೀವಿಗೂ ಲೇಸು ಬಯಸಿದ್ದ ಬಸವಣ್ಣ
ಬೀದರ್: ಜು.9:ಬಸವಣ್ಣನವರು ಸಕಲ ಜೀವಿಗೂ ಲೇಸು ಬಯಸಿದ್ದರು ಎಂದು ಡಾ. ಜಯದೇವಿ ತಾಯಿ ಲಿಗಾಡೆ ರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಸಾಹಿತಿ ರಜಿಯಾ ಬಳಬಟ್ಟಿ ನುಡಿದರು.
ವಚನಾಮೃತ ಕನ್ನಡ ಸಂಘದಿಂದ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಸಮೀಪದ ಮಹಾಲಕ್ಷ್ಮಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಬಸವೇಶ್ವರರು ಪ್ರತಿಪಾದಿಸಿದ ಜೀವನ ಮೌಲ್ಯಗಳು ಕುರಿತ ಕವಿಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಸವಣ್ಣ ಮಹಾ ಮಾನವತಾವಾದಿ ಆಗಿದ್ದರು. ಸಮಾನತೆ ತತ್ವ ಪ್ರತಿಪಾದಿಸಿದ್ದರು. ಮನುಕುಲದ ಕಲ್ಯಾಣಕ್ಕೆ ಅವಿರತ ಶ್ರಮಿಸಿದ್ದರು ಎಂದು ಬಣ್ಣಿಸಿದರು.
ಬಸವಣ್ಣನವರ ತತ್ವಗಳ ಆಚರಣೆ ಇಂದಿನ ಅವಶ್ಯಕತೆಯಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಪೆÇ್ರ. ಸಿದ್ರಾಮಪ್ಪ ಮಾಸಿಮಾಡೆ ಮಾತನಾಡಿ, ಬಸವಣ್ಣನವರ ವಚನಗಳು ಜೀವನ ಸೂತ್ರವನ್ನು ಒಳಗೊಂಡಿವೆ ಎಂದು ತಿಳಿಸಿದರು.
ಜಗತ್ತು ಕಟ್ಟುವ, ಜನರ ಜ್ಞಾನದ ಹಸಿವು ನೀಗಿಸುವಂಥ ಸಾಹಿತ್ಯ ರಚನೆ ಆಗಬೇಕಿದೆ ಎಂದು ಹೇಳಿದರು.
ನಿವೃತ್ತ ಪ್ರಾಚಾರ್ಯ ಡಾ. ಸೂರ್ಯಕಾಂತ ಚಿದ್ರೆ ಮಾತನಾಡಿ, ಬಸವಣ್ಣನವರ ವಚನಗಳನ್ನು ಅನುಸರಿಸಿದ್ದಲ್ಲಿ ಸುಂದರ ಬದುಕು ಕಟ್ಟಿಕೊಳ್ಳಬಹುದು ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ ಮಾತನಾಡಿ, ಬಸವಾದಿ ಶರಣರ ವಚನಗಳಲ್ಲಿ ಜೀವನ ಮೌಲ್ಯಗಳಿವೆ. ಅವುಗಳನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕು ಎಂದು ಹೇಳಿದರು.
ಸೂರ್ಯಕಾಂತ ಹೊಡಮನಿ, ವಿದ್ಯಾವತಿ ಬಲ್ಲೂರ, ಪಾರ್ವತಿ ಸೋನಾರೆ, ಸುನಿತಾ ದಾಡಗೆ, ಜಗದೇವಿ ಮೈನಾಳೆ, ರೇಣುಕಾ ಎನ್.ಬಿ, ಸ್ವರೂಪರಾಣಿ ನಾಗೂರೆ, ರೇಣುಕಾ ಮಳ್ಳಿ, ಶ್ರೇಯಾ ಮಹೇಂದ್ರಕರ್ ಹಾಗೂ ಶ್ರೀದೇವಿ ಸೋಮಶೆಟ್ಟಿ ಸ್ವರಚಿತ ಕವನ ವಾಚಿಸಿದರು.
ಶಿಕ್ಷಕ ಶ್ರೀಕಾಂತ ಪಾಟೀಲ ಉಪಸ್ಥಿತರಿದ್ದರು. ಜಯದೇವಿ ಯದಲಾಪುರೆ ನಿರೂಪಿಸಿದರು. ಜೀಜಾಮಾತಾ ಕನ್ಯಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಪರಮೇಶ್ವರ ಬಿರಾದಾರ ಸ್ವಾಗತಿಸಿದರು. ಬಸವರಾಜ ಮೂಲಗೆ ವಂದಿಸಿದರು.