ರಾಜ್ಯದ ಹಲವೆಡೆ ಮಳೆ ನಿರೀಕ್ಷೆ
ಬೆಂಗಳೂರು,ಜು.೯-ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ ೩೦-೪೦ ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಜೊತೆಗೆ ಸಾಧಾರಣ ಮಳೆ-ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಜುಲೈ ೧೦ ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆ-ಗುಡುಗು ಸಹಿತ ೩೦-೪೦ ರ ವೇಗದ ಗಾಳಿಯ ಸಾಧ್ಯತೆ.
ಮುಂದಿನ ೨೪ ಗಂಟೆಗಳ ಕಾಲ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗದೊಂದಿಗೆ (೩೦-೪೦ ಕಿಮೀ) ನಿರಂತರವಾದ ಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ೨೭ ಲಿ ಸಿ ಮತ್ತು ೨೧ ಲಿ ಸಿ ಆಗಿರಬಹುದು.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ೪೮ ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರುತ್ತದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗದೊಂದಿಗೆ (೩೦-೪೦ ಕಿಮೀ/ಗಂ) ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ೨೭ ಲಿ ಸಿ ಮತ್ತು ೨೧ ಲಿ ಸಿ ಆಗಿರುತ್ತದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.
ಜೂನ್‌ನಲ್ಲಿ ದುರ್ಬಲವಾಗಿದ್ದ ಮುಂಗಾರು ಮಳೆ ಜುಲೈನಲ್ಲಿ ಜೋರಾಗಿದೆ. ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ಮಾಹಿತಿ ಪ್ರಕಾರ, ಈ ಬಾರಿ ವಾಡಿಕೆಗಿಂತ ಹೆಚ್ಚಾಗಿದೆ. ೮ ರಷ್ಟು ಹೆಚ್ಚು ಮಳೆಯಾಗಿದೆ. ಆದರೆ, ಮಲೆನಾಡಿನಲ್ಲಿ ಮಳೆ ಕೊರತೆ ಇದ್ದು, ಶೇ.೧೯ರಷ್ಟು ಕಡಿಮೆ ಮಳೆಯಾಗಿದೆ. ಜೂನ್ ೧ರಿಂದ ೩೦ರವರೆಗೆ ರಾಜ್ಯದಲ್ಲಿ ಶೇ. ೩ರಷ್ಟು ಮಳೆ ಕೊರತೆ ಉಂಟಾಗಿದೆ. ಸಾಮಾನ್ಯವಾಗಿ ಜೂನ್ ತಿಂಗಳಲ್ಲಿ ೧೯೯ ಮಿ.ಮೀ. ಮಳೆ ಬರಬೇಕು. ಆದರೆ ಈ ಬಾರಿ ೧೯೪ ಮಿ.ಮೀ. ಮಳೆಯಾಗಿದೆ. ಉತ್ತರ ಒಳ ಮತ್ತು ದಕ್ಷಿಣ ಒಳಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಕರಾವಳಿ ಮತ್ತು ಪರ್ವತ ಪ್ರದೇಶಗಳಲ್ಲಿ ಮಳೆಯ ಕೊರತೆ ಕಂಡುಬಂದಿದೆ. ಆದರೆ ಜುಲೈನಲ್ಲಿ ಮಳೆಯ ಪ್ರಮಾಣ ಹೆಚ್ಚಿದ್ದು, ಜು. ಸಾಮಾನ್ಯಕ್ಕಿಂತ ೧ ರಿಂದ ೮ ಪ್ರತಿಶತ. ೨೯ರಷ್ಟು ಹೆಚ್ಚು ಮಳೆಯಾಗಿದೆ. ಸಾಮಾನ್ಯವಾಗಿ ಜು. ೧ ರಿಂದ ೮ ೬೭ ಮಿ.ಮೀ. ಮಳೆಯಾಗಿದ್ದು, ಈ ಬಾರಿ ೮೬ ಮಿ.ಮೀ. ಮಳೆ ಬರುತ್ತಿದೆ.