ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿ
ಬೀದರ:ಸೆ.27: ಒಂದು ದೇಶ ಒಂದು ಚುನಾವಣೆಯ ಇದೊಂದು ಕೇಂದ್ರ ಸರ್ಕಾರದ ಅಜೆಂಡಾದ ಭಾಗ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಇದನ್ನು ಅನುಷ್ಠಾನ ಮಾಡುವುದಕ್ಕೆ ಸಾಧ್ಯವೆ ಇಲ್ಲ. ಆಡಳಿತಾರೂಡ ಬಿಜೆಪಿಯ ಗುಪ್ತ ಅಜೆಂಡಾವನ್ನು ಒಳಗೊಂಡಿರುವ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪವನ್ನು ಸಂಸತ್ ಒಳಗೆ ಮತ್ತು ಹೊರಗೆ ದೇಶದ ಜನಾಭಿಪ್ರಾಯವೂ ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆಗೆ ವಿರುದ್ಧವಾಗಿದೆ.
.
ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನ ಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ ಸಾಮಥ್ರ್ಯ ನಮ್ಮ ಈಗ ಇರುವ ಚುನಾವಣೆ ಆಯೋಗಕ್ಕೆ ಇಲ್ಲ. ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ. ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗುತ್ತದೆ. ಇದರ ಜೊತೆಗೆ ಸಂವಿಧಾನದ ಕೈ ತಿದ್ದುಪಡಿ ತರಬೇಕಾಗುತ್ತದೆ. ಇವೆಲ್ಲವೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಗೊತ್ತಿದ್ದರೂ ಕೇವಲ ಜನರಲ್ಲಿ ಗೊಂದಲವನ್ನು ಹುಟ್ಟು ಹಾಕಿ ತಮ್ಮ ವೈಪಲ್ಯವನ್ನು ಮುಚ್ಚಿ ಹಾಕಲು ಈ ಕೆಲಸವನ್ನು ಮಾಡಲಾಗಿದೆ.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯಾದಾದ್ಯಂತ ಎಲ್ಲಾ ಜಿಲ್ಲೆಗಳಿಂದ ಆಯಾ ಜಿಲ್ಲಾಧಿಕಾರಿಗಳ ಮೂಲ ಮನವಿಯನ್ನು ಸಲ್ಲಿಸಲಾಗಿದೆ. ಬೀದರೆ ಜಿಲ್ಲೆಯಲ್ಲಿ ನೂರಾರು ಜನ ಸೇರಿ ಧರಣಿ ಮಾಡುವುದರ ಮೂಲಕ ಘನತೆವೆತ್ತ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ಮಾರುತಿ ಬೌದ್ಧೆ, ಜಿಲ್ಲಾ ಸಂಘಟನಾ ಸಂಚಾಲಕರಾದ ಅಶೋಕ ಗಾಯಕವಾಡ, ಜಿಲ್ಲಾ ಸಂಚಾಲಕರಾದ ಅರುಣ ಪಟೇಲ್, ರಾಜಕುಮಾರ ವಾಘಮಾರೆ, ರಮೇಶ ಬೆಲ್ದಾರ, ಶಿವರಾಜ ತಡಪಳ್ಳಿ, ಸತೀಶ ರತ್ನಾಕರ್, ಶಿರೋಮಣಿ ಹಲಗೆ, ಬಸವರಾಜ ಭಾವಿದೊಡ್ಡಿ, ರಾಹುಲ ಹಾಲಹಿಪ್ಪರ್ಗಾ, ಶಿವಕುಮಾರ ಗುನ್ನಳ್ಳಿ, ಗೌತಮ ಮುತ್ತಂಗಿಕರ್, ಜೈಭೀಮ ಚಿಮ್ಮನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.