ಹಾವು ಕಚ್ಚಿ ವ್ಯಕ್ತಿ ಸಾವು
ವಿಜಯಪುರ,ಜು.8:ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕರಭಂಟನಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬನು ಹಾವು ಕಚ್ಚಿ ಮೃತಪಟ್ಟಿದ್ದಾನೆ.
ಕರಭಂಟನಾಳ ಗ್ರಾಮದ ಗಂಗಾಧರ ಹನಮಂತರಾಯ ನರಸಲಗಿ (26) ಮೃತಪಟ್ಟ ವ್ಯಕ್ತಿ.
ಹೊಲದಲ್ಲಿ ಕಬ್ಬಿನ ಬೆಳೆಗೆ ನೀರು ಹಾಯಿಸುವ ವೇಳೆ ಆಕಸ್ಮಿಕವಾಗಿ ಬಲಗಾಲು ಹಿಂಬಡಿಗೆ ಹಾವು ಕಚ್ಚಿತು. ತಕ್ಷಣ ಆತನನ್ನು ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಗಂಗಾಧರ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ.
ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.