ರಾಜಧಾನಿಗೆ ಹೊಸ ಬಸ್ ಲೋಕಾರ್ಪಣೆ
ಅಫಜಲಪುರ:ಜು.8: ಪಟ್ಟಣದ ಕೇಂದ್ರ ಸಾರಿಗೆ ಬಸ್ ನಿಲ್ದಾಣದಲ್ಲಿ ಶಾಸಕ ಎಂ.ವೈ ಪಾಟೀಲ್ ಅವರು ರಾಜ್ಯದ ರಾಜಧಾನಿ ಬೆಂಗಳೂರಿಗೆ ಹೊಸ ಬಸ್ ಲೋಕಾರ್ಪಣೆಗೊಳಿಸಿ ಸಿಬ್ಬಂದಿಗಳಿಗೆ ಅಭಿನಂದಿಸಿ ಮಾತನಾಡಿದರು.
ಬೆಳೆಯುತ್ತಿರುವ ಪಟ್ಟಣ ಪ್ರದೇಶದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಹೊಸ ಹೊಸ ಮಾರ್ಗಗಳಿಗೆ ಹಾಗೂ ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲಾ ಕೇಂದ್ರಗಳಿಗೆ ಸಾರ್ವಜನಿಕರು ತಲುಪಲು ಈಗಾಗಲೇ ನೂತನ ಸಾರಿಗೆ ಬಸ್ಸುಗಳನ್ನು ನಮ್ಮ ಸರ್ಕಾರದ ವತಿಯಿಂದ ಒದಗಿಸಲಾಗಿದೆ. ಹಾಗೂ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಹೊಸ ಮಾರ್ಗಗಳಿಗೆ ಬಸ್ಸುಗಳನ್ನು ಓಡಿಸುವ ಗುರಿ ಹೊಂದಲಾಗಿದ್ದ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು
ನಂತರ ಘಟಕ ವ್ಯವಸ್ಥಾಪಕ ಎ.ಎ ಭೋವಿ ಅವರು ಮಾತನಾಡಿ, ಕ್ಷೇತ್ರದ ಶಾಸಕರು ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಬೇಡಿಕೆ ಹಾಗೂ ಅಗತ್ಯಕ್ಕೆ ತಕ್ಕಂತೆ ಹೊಸ ಬಸ್ಸುಗಳನ್ನು ಒದಗಿಸಿ ಸಹಕರಿಸುತ್ತಿದ್ದಾರೆ. ಹೀಗಾಗಿ ಸಾರಿಗೆ ಬಸ್ ಪ್ರಯಾಣಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಪ್ರತಿದಿನ ಮಧ್ಯಾಹ್ನ 2:30 ಗಂಟೆಗೆ ಅಫಜಲಪುರ ಬಸ್ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವ ಬಸ್ಸು ಆನೂರ, ಬಿಲ್ವಾಡ, ತೆಲ್ಲೂರ, ಗಾಣಗಾಪೂರ, ಚವಡಾಪುರ, ಕಲಬುರಗಿ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳಸಲಿದೆ. ಹೀಗಾಗಿ ಪ್ರಯಾಣಿಕರು ನೂತನ ಸಾರಿಗೆ ಬಸ್ಸಿನ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಾರಿಗೆ ಸಿಬ್ಬಂದಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು.