ಜಗಜೀವನರಾಂ ದೇಶ ಕಂಡ ಮಹಾನ್ ಸ್ವಾತಂತ್ರ್ಯ ಹೋರಾಟಗಾರ
ವಿಜಯಪುರ.ಜು೮:ಬಾಬು ಜಗಜೀವನರಾಂ ಅವರು ದೇಶ ಕಂಡ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ದಕ್ಷ ಆಡಳಿತಗಾರರಾಗಿದ್ದರು. ಹಸಿರು ಕ್ರಾಂತಿಯ ಹರಿಕಾರರಾಗಿ ಜನಸಾಮಾನ್ಯರು ಎಂದಿಗೂ ಮರೆಯದ ವ್ಯಕ್ತಿತ್ವವನ್ನು ಹೊಂದಿದ್ದರು ಎಂದು ಪುರಸಭಾ ಮುಖ್ಯಾಧಿಕಾರಿ ಸಂತೋಷ್ ಕುಮಾರು ತಿಳಿಸಿದರು.
ಪಟ್ಟಣದ ಪುರಸಭಾ ಆವರಣದಲ್ಲಿ ಪುರಸಭಾ ವತಿಯಿಂದ ಆಯೋಜಿಸಿದ್ದ ಪ್ರಧಾನಿ ದಿ.ಬಾಬು ಜಗಜೀವನರಾಂ ಅವರ ಪುಣ್ಯಸ್ಮರಣೆಯಂದು ಅವರ ಭಾವ ಚಿತ್ರಕ್ಕೆ ಪುಷ್ವ ನಮನ ಸಲ್ಲಿಸಿ ಮಾತನಾಡಿದರು.
ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಅವರು ಹೊಂದಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು. ದೇಶದ ಜನರು ಅಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಪ್ರಾರಂಭಿಸಿ ನೆರವಾದರು ಎಂದು ತಿಳಿಸಿದರು.
ಪುರಸಭಾ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, ದೇಶವನ್ನು ಹಸಿವಿನಿಂದ ಮುಕ್ತಗೊಳಿಸಿ ಕೃಷಿ ಕ್ಷೇತ್ರದಲ್ಲಿ ಸುಧಾರಣೆ ಮಾಡುವ ಮೂಲಕ ಬಾಬು ಜಗಜೀವನ್ ರಾಂ ಹಸಿರು ಕ್ರಾಂತಿಯ ಹರಿಕಾರರಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ಚಂದ್ರು, ಕಂದಾಯ ನಿರೀಕ್ಷಕ ತ್ಯಾಗರಾಜ್ ಪರಿಸರ ಅಭಿಯಂತರ ಶೇಖರ್, ಆರೋಗ್ಯಧಿಕಾರಿ ಲಾವಣ್ಯ, ಸಹನಾ, ಪುರಸಭೆ ಸಿಬ್ಬಂದಿಯಾದ ಅನಿಲ್ ಪವನ್ ಜೋಶಿ, ಜನಾರ್ಧನ, ಸುನೀಲ್, ಮಂಜುನಾಥ್, ಪೃಥ್ವಿ, ಶಿವ ನಾಗೇಗೌಡ, ಮೂರ್ತಿ, ವಿನೋದ್, ರವಿ, ಗೋಪಿಕೃಷ್ಣ, ಹೇಮಾವತಿ, ಲಿಂಗಣ್ಣ, ಕುಮಾರ್, ಮಂಜುನಾಥ್, ಹೇಮಂತ್ ಕುಮಾರ್, ಜನಾರ್ಧನ್, ಪುರಸಭೆ ಪೌರಕಾರ್ಮಿಕರು ಸರ್ಕಾರಿ ಶಾಲೆಯ ಮಕ್ಕಳು ಹಾಗೂ ಉಪಾಧ್ಯಾಯರು ಇದ್ದರು.