ಇಟಗಾ ಗ್ರಾಮದಲ್ಲಿ ಮಂಗಗಳ ಹಾವಳಿ : ಗ್ರಾಮಸ್ಥರಲ್ಲಿ ಹೆಚ್ಚಿದ ಭಯ, ಆತಂಕ
ಚಿಟಗುಪ್ಪಾ,ಜು.8-ತಾಲ್ಲೂಕಿನ ಇಟಗಾ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಗ್ರಾಮಸ್ಥರು ಭಯ, ಆತಂದಿಂದ ಬದುಕುವಂತಾಗಿದೆ.
ಮಕ್ಕಳ ಮೇಲೆ ಮಂಗಗಳು ದಾಳಿ ಮಾಡಿದ್ದು, ಇದರಿಂದಾಗಿ ಗ್ರಾಮದಲ್ಲಿ ಭಯ, ಆತಂಕದ ವಾತಾವರಣ ನಿರ್ಮಾಣವಾದಂತಾಗಿದೆ. ಸುದ್ದಿ ತಿಳಿದು ಕ್ಷೇತ್ರದ ಶಾಸಕ ಡಾ.ಸಿದ್ದು ಪಾಟೀಲ ಅವರು ಗ್ರಾಮಕ್ಕೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಸ್ಥಳದಲ್ಲಿದ್ದ ತಾಲ್ಲೂಕ ಅರಣ್ಯ ಅಧಿಕಾರಿ ಶಿವಕುಮಾರ ರಾಥೋಡ್ ಅವರಿಗೆ ಮಂಗಾಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿ, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಪಶುಸಂಗೋಪನ ಅಧಿಕಾರಿ ಶಾಂತವೀರ ಗೋಪಾ , ಮುಖಂಡರರಾದ ಡಾ.ಭದ್ರೇಶ ಪಾಟೀಲ , ಆನಂದ ಸಾಗರ , ಕಂಠಯ್ಯ ಸ್ವಾಮಿ , ಭದ್ರು ಜಾದವ , ಜಗನಾಥ ಪಾಟೀಲ, ಸಂಜೂಕುಮಾರ ಮುಂತಾದವರು ಉಪಸ್ಥಿತರಿದ್ದರು.