ಡಾ. ಬಾಬು ಜಗಜೀವನ್ ರಾಮ್ ಜೀವನ ಸಾಧನೆ ಸ್ಮರಣೆ ಅಗತ್ಯ ಶಾಸಕ ದರ್ಶನ್
ಸಂಜೆವಾಣಿ ವಾರ್ತೆ
ನಂಜನಗೂಡು.ಜು.08:- ನಂಜನಗೂಡಿನ ಮಿನಿ ವಿಧಾನಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿಗಳಾದ ಡಾ. ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನಂಜನಗೂಡು ಕ್ಷೇತ್ರದ ಜನಪ್ರಿಯ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ಪಾಲ್ಗೊಂಡು, ಉಪಪ್ರಧಾನಿಗಳಾದ ಡಾ. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಪುಷ್ಪ ನಮನ ಸಲ್ಲಿಸಿ, ಅವರ ಹೋರಾಟ ಮತ್ತು ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರು ಒಂದೇ ವರ್ಗಕ್ಕೆ ಸೀಮಿತ ರಾದವರಲ್ಲ ಬಡವರು ಶೋಷಿತರು ದೀನ ದಲಿತರು ಸೇರಿದಂತೆ ಎಲ್ಲರ ಸಯೋಬಿದ್ದಿಗಾಗಿ ಅವಿರತವಾಗಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕರು ಆಗಿದ್ದರು ಸ್ವತಂತ್ರ ಹೋರಾಟ ಆಗಿದ್ದ ಬಾಪೂಜಿಯವರು 78 ವರ್ಷ ಜೀವಂತ ಅವಧಿಯಲ್ಲಿ 50 ವರ್ಷಗಳನ್ನು ರಾಜಕಾರಣದಲ್ಲಿ ಕಳೆದು ಅನೇಕ ಖಾತೆಗಳನ್ನು ಸಮರ್ಥವಾಗಿ ನಿಬಾಯಿಸಿದ್ದಾರೆ ತುರ್ತು ಪರಿಸ್ಥಿತಿ ಘೋಷಣೆ ಯಾದ ಸಂದರ್ಭದಲ್ಲಿ ಆಡಳಿತ ಚುಖಾನೆ ಹಿಡಿದು ದೇಶವನ್ನು ಮುನ್ನಡೆಸಿದ ಕೀರ್ತಿ ಬಾಬೂಜಿಯವರಿಗೆ ಸಲ್ಲುತ್ತದೆ ಹಾರ ಅಬೌ ಉಂಟಾದಾಗ ಇತರ ದೇಶಗಳ ಆಹಾರ ಪರಿಸ್ಥಿತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಿ ಭಾರತದ ಆಹಾರ ಕ್ಷೇತ್ರದಲ್ಲಿ ಸ್ವ ವಲಂಬನೆ ಸಾಧಿಸಲು ನೆರವಾದರೂ ಎಂದರು
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ತಹಸೀಲ್ದಾರ್ ಶಿವಕುಮಾರ್ ಕಸನೂರ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.