ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೆಸ ಸೆಮಿಸ್ಟರ್ ಪರೀಕ್ಷೆ ನಡೆಸಲು ಒತ್ತಾಯ
ಸಂಜೆವಾಣಿ ವಾರ್ತೆ
ದಾವಣಗೆರೆ, ಜು.3; ದಾವಣಗೆರೆ ವಿಶ್ವ ವಿದ್ಯಾನಿಲಯದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೆಸ ಸೆಮಿಸ್ಟರ್ ನಡೆಸಲು ಒತ್ತಾಯಿಸಿ ಎಐಡಿಎಸ್ಓ ಜಿಲ್ಲಾ ಘಟಕದ ನೇತೃತ್ವದಲ್ಲಿ ತಾಲೂಕಿನ ತೋಳಹುಣಸೆ ಶಿವಗಂಗೋತ್ರಿಯ ದಾವಿವಿ ಕಚೇರಿ ಎದುರು ಪ್ರತಿಭಟಿಸಲಾಯಿತು.ತಾಲೂಕಿನ ಶಿವಗಂಗೋತ್ರಿಯ ದಾವಿವಿ ಕಚೇರಿ ಎದುರು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪ ಕುಲಪತಿ ಪ್ರೊ.ಎಫ್‌.ಡಿ.ಕುಂಬಾರ ಅವರಿಗೆ ಮನವಿ ಪತ್ರವನ್ನು ಅರ್ಪಿಸಿದರು.