ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು.ಹಳಕಟ್ಟಿ  ತ್ಯಾಗ ಅವಿಸ್ಮರಣೀಯ
ಸಂಜೆವಾಣಿ ವಾರ್ತೆ
ದಾವಣಗೆರೆ ಜು.8; ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಡಾ; ಫ.ಗು.ಹಳಕಟ್ಟಿಯವರು ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ ಜನತೆಗೆ ಪರಿಚಯಿಸುವ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಜನ್ಮದಿನಾಚರಣೆ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸಿ ಮಾತನಾಡಿದÀರು.ಹನ್ನೆರಡನೇ ಶತಮಾನದ ವಚನ ಸಾಹಿತ್ಯ ನಮಗೆ ಇಷ್ಟೊಂದು ಸುಲಭವಾಗಿ ಸಿಗುತ್ತಿವೆ, ಅಂದರೆ ಅದಕ್ಕೆ ಮೂಲ ಕಾರಣ ಡಾ|| ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ರವರು. ನಶಿಸಿ ಹೋಗುತ್ತಿದ್ದ ವಚನ ಸಾಹಿತ್ಯದ ಮೂಲ ಪ್ರತಿಗಳಾದ ಅಮೂಲ್ಯವಾದ ತಾಳೆಗರಿಗಳನ್ನು ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಗೆ ತೆರಳಿ, ಹುಡುಕಿ, ಸಂಗ್ರಹಿಸಿ ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಅವುಗಳನ್ನು ಗ್ರಂಥರೂಪದಲ್ಲಿ ಎಲ್ಲರೂ ಓದಲು ಅನುಕೂಲವಾಗುವಂತೆ ಮುದ್ರಿಸಿದ ಫ.ಗು. ಹಳಕಟ್ಟಿಯವರ ಕಾರ್ಯದಿಂದಾಗಿ ಇಂದು ಅಮೂಲ್ಯ ವಚನ ಭಂಡಾರ ಎಲ್ಲರಿಗೂ ತಲುಪಲು ಸಾಧ್ಯವಾಗಿದೆ ಎಂದರು.ವಚನಗಳಲ್ಲಿರುವ ಮಾನವೀಯ ಮೌಲ್ಯಗಳು, ಜೀವನ ಸಂದೇಶಗಳು, ವಿಶ್ವಶಾಂತಿ, ವಿಶ್ವಪ್ರೇಮ ಮೂಡಿಸುತ್ತದೆ. ಶರಣರು ತಮ್ಮ ಜೀವನದ ಅನುಭವಗಳನ್ನು ವೇದ-ಉಪನಿಷತ್ತುಗಳನ್ನು ಜನಸಾಮಾನ್ಯರಿಗೆ ತಿಳಿಯುವಂತೆ ವಚನಗಳ ಮೂಲಕ ರಚಿಸುತ್ತಿದ್ದರು. ಸಮಾಜದಲ್ಲಿ ನಡೆಯುವ ದೌರ್ಜನ್ಯಗಳನ್ನು ತಡೆಯಲು ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ತಿಳಿದ ಹಳಕಟ್ಟಿಯವರು ಸಾಕಷ್ಟು ಸಂಶೋಧನೆ ನಡೆಸಿ ವಚನಗಳನ್ನು ಸಂರಕ್ಷಿಸಿ ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ.