ಬಾಬು ಜಗಜೀವನ್ ರಾಂ ಪುಣ್ಯ ಸ್ಮರಣೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜು.೭; ಹಸಿರು ಕ್ರಾಂತಿಯ ಹರಿಹಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ 38ನೇ ಪುಣ್ಯ ಸ್ಮರಣೆ ನಿಮಿತ್ತ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು.ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಮುಂತಾದವರು ಬಾಬು ಜಗಜೀವನ್ ರಾಂ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ಸಲ್ಲಿಸಿದರು.