ಯಾವುದೇ ಗ್ರಾಮದಲ್ಲಿ ಕಲುಷಿತ ನೀರಿನ ಪ್ರಕರಣಗಳು ಆಗದಂತೆ ಕ್ರಮ ಕೈಗೊಳ್ಳಿ
ಸಂಜಜೆವಾಣಿ ವಾರ್ತೆ
ಚಿತ್ರದುರ್ಗ.ಜು.೭; ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ, ನೀರುಗಂಟಿಗಳಗೆ ಮಾಹಿತಿಯನ್ನು ನೀಡಿ.  ಯಾವುದೇ ಗ್ರಾಮಗಳಲ್ಲಿ ಕಲುಷಿತ ನೀರಿನ ಪ್ರಕರಣಗಳು ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ ಚಿತ್ರದುರ್ಗ ಇವರ ಸಹಯೋಗದಲ್ಲಿ ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಫೀಲ್ಡ್ ಟೆಸ್ಟ್ ಕಿಟ್ ಮತ್ತು ಹೆಚ್ 2 ಎಸ್ ವೈಲ್ಸ್ ಉಪಯೋಗಿಸಿ ನೀರು ಪರಿಕ್ಷೇಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ತರಭೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲೆಯ 6 ತಾಲ್ಲೂಕು ಗಳ 189 ಗ್ರಾಮ ಪಂಚಾಯತಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀರು ಪರೀಕ್ಷೆ ಕಿಟ್ ಮತ್ತು ವೈಲ್ಸ್ ಉಪಯೋಗಿಸಿ ನೀರಿನ ಪರೀಕ್ಷೆ ಗಳನ್ನು ಕೈಗೊಳ್ಳಲು ಪರಿಣಾಮಕಾರಿಯಾಗಿ ತರಭೇತಿಯನ್ನು ನೀಡಲಾಗಿದೆ. ಅದರಿಂದ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಮತ್ತು ನೀರುಗಂಟಿಗಳಗೆ ಮಾಹಿತಿಯನ್ನು ನೀಡಿ ಯಾವುದೇ ಗ್ರಾಮಗಳಲ್ಲಿ ಕಲುಷಿತ ನೀರಿನ ಪ್ರಕರಣಗಳು ಆಗದಂತೆ ಕ್ರಮ ಕೈಗೊಳ್ಳಬೇಕು. ತರಬೇತಿ ಪಡೆದಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಹಾಗೂ ಅಭಿಪ್ರಾಯವನ್ನು ಪಡೆದುಕೊಂಡರು.