ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ ಸ್ಥಳಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ
ಅಥಣಿ : ಸೆ.27:ಕೆಲಸದ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಕರ್ತವ್ಯವನ್ನು ಬಹಿಷ್ಕರಿಸಿ ಕೈಗೆ ಕಟ್ಟಿಕೊಂಡು ತಹಶೀಲ್ದಾರ್ ಕಚೇರಿ ಮಿನಿ ವಿಧಾನಸೌಧದ ಎದುರಿಗೆ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು.
ಮುಷ್ಕರಕ್ಕೆ ನಡೆಸುತ್ತಿರುವ ಸ್ಥಳಕ್ಕೆ ಸ್ಥಳೀಯ ಶಾಸಕ ಲಕ್ಷ್ಮಣ ಸವದಿ ಅವರು ಭೇಟಿ ನೀಡಿ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳು ಶಾಸಕರಿಗೆ
ತಮ್ಮ ಸಮಸ್ಯೆಗಳಾದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರ ಮೂಲಭೂತ ಸೌಲಭ್ಯಗಳನ್ನು ಒದಗಿಸುತ್ತಿಲ್ಲ, ಅನೇಕ ಗ್ರಾಮಗಳ ಆಡಳಿತ ಅಧಿಕಾರಿಗಳಿಗೆ ಕಚೇರಿಗಳಲ್ಲ ಸ್ವಂತ ಕಟ್ಟಡ ಮತ್ತು ಪೀಠೋಪಕರಣಗಳಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು
ಈ ವೇಳೆ ಶಾಸಕರಾದ ಲಕ್ಷ್ಮಣ ಸವದಿ ಅವರು ಮಾತನಾಡಿ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳ ಈಡೇರಿಕೆಗಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಜೊತೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.