ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!
ಸಂಜೆವಾಣಿ ವಾರ್ತೆ
ಶಿವಮೊಗ್ಗ, ಜು. ೭: ಮಲೆನಾಡಿನಲ್ಲಿ ಮುಂಗಾರು ಮಳೆ ಮುಂದುವರಿದಿದ್ದರೂ ಅಬ್ಬರ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ ಹಾಗೂ ಭದ್ರಾ ನೀರಿನ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ.ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ ಲಿಂಗನಮಕ್ಕಿ ಡ್ಯಾಂನ ಒಳಹರಿವು 20,420 ಕ್ಯೂಸೆಕ್ ಗೆ ಇಳಿಕೆಯಾಗಿದೆ. 2030 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1764.8 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1744.4 ಅಡಿ ನೀರು ಸಂಗ್ರಹವಾಗಿತ್ತು.ಭದ್ರಾ ಡ್ಯಾಂನ ಒಳಹರಿವು 7736 ಕ್ಯೂಸೆಕ್ ಗೆ ಇಳಿಕೆಯಾಗಿದೆ. 352 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 130.7 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 138 ಅಡಿಯಿತ್ತು.ಉಳಿದಂತೆ ತುಂಗಾ ಜಲಾಶಯವು ಈಗಾಗಲೇ ಗರಿಷ್ಠ ಮಟ್ಟವಾದ 588.24 ಮೀಟರ್ ತಲುಪಿದೆ. ಪ್ರಸ್ತುತ ಡ್ಯಾಂನ ಒಳಹರಿವು 17,289 ಕ್ಯೂಸೆಕ್ ಇದೆ. 14,662 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಾಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ.