ಭ್ರೂಣಲಿಂಗ ಪತ್ತೆ : ಮಾಹಿತಿದಾರರಿಗೆ ರೂ.1 ಲಕ್ಷ ಬಹುಮಾನ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜು.೭; ಪಿ.ಸಿ.ಪಿ.ಎನ್.ಡಿ.ಟಿ (ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ ವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ ಅನುಸಾರ ಸಲಹಾ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಸಲಹಾ ಸಮಿತಿ ಅಧ್ಯಕ್ಷರಾಗಿ ಚಿತ್ರದುರ್ಗದ ಖಾಸಗಿ ನರ್ಸಿಂಗ್ ಹೋಂನ ತಜ್ಞ ವೈದ್ಯೆ ಡಾ.ಸೌಮ್ಯ, ಸದಸ್ಯ ಕಾರ್ಯದರ್ಶಿಯಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಸದಸ್ಯರುಗಳಾಗಿ, ಡಾ.ದೇವರಾಜು, ಡಾ.ಸತ್ಯನಾರಾಯಣ, ಕಾನೂನು ಸಲಹೆಗಾರರಾಗಿ ವಕೀಲ ಉಮೇಶ್, ಸರ್ಕಾರೇತರ ಸ್ವಯಂ ಸೇವಾ ಸಂಘದ ಮೀನಾಕ್ಷಿ, ಗಾಯಿತ್ರಿ ಶಿವರಾಂ, ಜಿ.ಎಸ್.ಗೌಡ ಸೇರಿದಂತೆ ಜಿಲ್ಲಾ ವಾರ್ತಾಧಿಕಾರಿ, ಸರ್ಕಾರಿ ಅಭಿಯೋಜಕರು ಕಾರ್ಯನಿರ್ವಹಿಸಲಿದ್ದಾರೆ.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಸಲಹಾ ಸಮಿತಿ ಸಭೆ ಜರುಗಿತು.