ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನಸಹಾಯ : ಸಚಿವ ಡಿ. ಸುಧಾಕರ್.
ಸಂಜೆವಾಣಿ ವಾರ್ತೆ
ಹಿರಿಯೂರು: ಜು. 7. ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ, ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯೂರು ವತಿಯಿಂದ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವರಾದ ಡಿ. ಸುಧಾಕರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುಮಾರು ಒಂದುವರೆ ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಿದರು. ಹೆಚ್ಚು ಅಂಕಗಳಿಸಿ ಮುತ್ತಿನರಾಗುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡುವುದಾಗಿ ತಿಳಿಸಿದರು.ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಕರೆ ನೀಡಿದರು.ಕಾರ್ಯಕ್ರಮದಲ್ಲಿ  ಪ್ರೊ. ತಿಪ್ಪೇಸ್ವಾಮಿ ಹೆಚ್, ನಿವೃತ್ತ ಶಿಕ್ಷಣ ನಿರ್ದೇಶಕರು ಚಳ್ಳಕೆರೆ ಹಾಗೂ ಅಶೋಕ್ ಹಳೆ ವಿದ್ಯಾರ್ಥಿ ಹಾಗೂ ಕಾಂಗ್ರೆಸ್ ಮುಖಂಡರು ಗೆಡ್ಡೋಬನಹಳ್ಳಿ , ಶಾಂತರಾಜು ನಿವೃತ್ತ ಪ್ರಾಂಶುಪಾಲರು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ರಾಮಚಂದ್ರಪ್ಪ ನಿವೃತ್ತ ಪ್ರಾಂಶುಪಾಲರು ಹಾಗೂ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರು ಎಚ್ ಡಿ ಚಂದ್ರಶೇಖರ್ ,  ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರವಿಚಂದ್ರ ನಾಯ್ಕ್  ಮಹಮದ್ ಫಕ್ರುದ್ದೀನ್, ಈರಲಿಂಗೇಗೌಡರು ಜಿ.ಎಲ್ ಮೂರ್ತಿ ಹಾಗೂ ದಾದಾಪೀರ್  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನ ಪ್ರೊಚಂದ್ರಶೇಖರಪ್ಪ ಡಿ ಪ್ರಾಂಶುಪಾಲರು ವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ಪ್ರೊ. ಧನಂಜಯ್, ಡಾ. ಅಣ್ಣಪ್ಪ ಸ್ವಾಮಿ ಪ್ರೊ. ನಾಗರಾಜ್,ಡಿ.ಆರ್. ಪ್ರಸನ್ನ ಕುಮಾರ್, ಡಾ. ನಟರಾಜ್, ಪರಮೇಶ್ ಮತ್ತು ಸಿಬ್ಬಂದಿ ಭಾಗವಹಿಸಿದ್ದರು