ಅಭಿನಂದನಾ, ಸನ್ಮಾನ ಸಮಾರಂಭ
ಲಕ್ಷ್ಮೇಶ್ವರ ಜು 7: ಶಿರಹಟ್ಟಿ ಕ್ಷೇತ್ರದ ಬಹುದಿನಗಳ ಬೇಡಿಕೆಯಾದ ಕಾರವಾರ ಕೈಗಾ ಇಳಕಲ್ ರಸ್ತೆಯ ಸಲುವಾಗಿ ಕೇಂದ್ರ ಸಚಿವರಿಗೆ ಹೊಸ ನ್ಯಾಷನಲ್ ಹೈವೇ ಮಾಡಲು ಮನವಿ ಮಾಡಿದ್ದು, ಅದಕ್ಕೆ ಸಚಿವರು ಭರವಸೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಪಟ್ಟಣದ ಜಗದ್ಗುರು ರಂಬಾಪುರಿ ಕಲ್ಯಾಣ ಮಂಟಪದಲ್ಲಿ ಶಿರಹಟ್ಟಿ ಮಂಡಲದ ಕಾರ್ಯಕರ್ತರಿಗೆ, ಮುಖಂಡರಿಗೆ ಅಭಿನಂದನಾ ಹಾಗೂ ನೂತನ ಸಂಸದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಲವಿಗಿ ಗದಗ ರೈಲ್ವೆ ಮಂಜುರಾತಿ ಆಗಿದ್ದು ಇದೆ. ಅದಕ್ಕೆ ಮುಖ್ಯಮಂತ್ರಿ ಇದ್ದಾಗ ಬಜೆಟನಲ್ಲಿ ಹಣ ಇಟ್ಟಿದ್ದೆ ಈಗ ಬಂದ ಸರಕಾರ ಯೋಜನೆ ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಅದನ್ನು ಕಾರ್ಯರೂಪಕ್ಕೆ ತರಲು ಶ್ರಮ ವಹಿಸುತ್ತೇನೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುತ್ತೇನೆ. ಮುಂಬರುವ ದಿನಗಳಲ್ಲಿ ಜಿಪಂ, ತಾಪಂ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಪಕ್ಷ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಾಸ್ತಾವಿಕವಾಗಿ ಡಾ. ಚಂದ್ರು ಲಮಾಣಿ ಮಾತನಾಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ ಮಾತನಾಡಿ, ಕಾರ್ಯಕರ್ತರು ಮತದಾರರ ಮನೆಗೆ ಹೋಗಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಿದ್ದೀರಿ. ಈ ಗೆಲುವು ಕಾರ್ಯಕರ್ತರಿಗೆ ಸಲ್ಲಬೇಕು. ಮುಂದಿನ ದಿನಗಳಲ್ಲಿ ಎಲ್ಲರೂ ಕೂಡಿ ಪಕ್ಷದ ಸಂಘಟನೆ ಮಾಡಬೇಕು ಎಂದು ಕರೆ ನೀಡಿದರು.
ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ಮಾತನಾಡಿ ಚುನಾವಣೆಯಲ್ಲಿ ನಿರೀಕ್ಷೆ ಮಾಡಿದ್ದಷ್ಟು ಮತ ಬಂದಿಲ್ಲ. ಮುಂದಿನ ದಿನಗಳಲ್ಲಿ, ಜಿಪಂ, ತಾಪಂ ಚುನಾವಣೆಯಲ್ಲಿ ಪಕ್ಷ ಸಂಘಟನೆ ಮಾಡೋಣ ಎಂದು ಹೇಳಿದರು.
ಶಿವಪ್ರಕಾಶ ಮಹಾಜನಶೆಟ್ಟರ, ನಾಗರಾಜ ಕುಲಕರ್ಣಿ, ಸಣ್ಣವೀರಪ್ಪ ಹಳ್ಳೆಪ್ಪನವರ ಮಾತನಾಡಿದರು.
ಈ ಸಂದರ್ಭದಲ್ಲಿ ಭೀಮಶಿಂಗ ರಾಠೋಡ, ಸಣ್ಣವೀರಪ್ಪ ಹಳ್ಳೆಪ್ಪನವರ, ಜೆಡಿಎಸ್ ತಾಲೂಕ ಅಧ್ಯಕ್ಷ ಪ್ರವೀಣ ಬಾಳಿಕಾಯಿ, ಫಕ್ಕೀರೇಶ ರಟ್ಟೀಹಳ್ಳಿ, ಚಂಬಣ್ಣ ಬಾಳಿಕಾಯಿ, ಎಂ. ಆರ್. ಪಾಟೀಲ, ನಿಂಗಪ್ಪ ಬನ್ನಿ, ಅಶ್ವಿನಿ ಅಂಕಲಕೋಟಿ, ನಾಗರಾಜ ಲಕ್ಕುಂಡಿ, ನಗರ ಬಿಜೆಪಿ ಅಧ್ಯಕ್ಷ ನವೀನ ಬೆಳ್ಳಟ್ಟಿ, ಪೂರ್ಣಜಿ ಕರಾಟೆ, ಶಿವಪ್ರಕಾಶ ಮಹಾಜನಶೆಟ್ಟರ, ಗಂಗಾಧರ ಮೆಣಸಿನಕಾಯಿ, ಹೇಮಗಿರೀಶ ಹಾವನಾಳ, ರವಿ ದಂಡಿನ, ಸೋಮೇಶ ಉಪನಾಳ, ಶಿವಣ್ಣ ಲಮಾಣಿ, ಜಾನು ಲಮಾಣಿ, ಎಂ.ಎಸ್. ದೊಡ್ಡಗೌಡ್ರ, ಡಿ.ವೈ. ಹುನಗುಂದ, ನವೀನ ಹಿರೇಮಠ, ಗಿರೀಶ ಚೌರಡ್ಡಿ ಸೇರಿದಂತೆ ಶಿರಹಟ್ಟಿ ಮುಂಡರಗಿ ಮಂಡಲದ ಬಿಜೆಪಿ ಕಾರ್ಯಕರ್ತರು ಇದ್ದರು. ಸುನೀಲ ಮಹಾಂತಶೆಟ್ಟರ ಸ್ವಾಗತಿಸಿದರು, ಅನೀಲ ಮುಳುಗುಂದ ಕಾರ್ಯಕ್ರಮ ನಿರ್ವಹಿಸಿದರು.