ಅಧಿಕಾರ ಸ್ವೀಕಾರ
ಗದಗ,ಜು7 : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.
ಸರ್ಕಾರದ ವರ್ಗಾವಣೆ ಆದೇಶದನ್ವಯ ನಿರ್ಗಮಿತ ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್ ಅವರು ನೂತನ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ನೂತನ ಜಿಲ್ಲಾಧಿಕಾರಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು. ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಇದ್ದರು.