ಸಚಿವೆ ಶೋಭಾ ಕರಂದ್ಲಾಜೆಗೆ ಸನ್ಮಾನ
ಕಲಬುರಗಿ:ಜು.7: ಕೇಂದ್ರ ಅತಿಸಣ್ಣ, ಸಣ್ಣ ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಹಾಗೂ ಉದ್ಯೋಗ ಖಾತೆಗಳ ರಾಜ್ಯ ಸಚಿವರಾದಂತ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸುವರ್ಣಭವನದ ಕಛೇರಿಯಲ್ಲಿ ಇ.ಪಿ.ಎಫ್ ವಿಶೇಷಚೇತನ ನೌಕರರ ಸಂಘ ಹಾಗೂ ಎಸ್.ಸಿ/ಎಸ್.ಟಿ ನೌಕರರ ಸಂಘದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಮಿಕರ ಭವಿಷ್ಯ ನಿಧಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷಚೇತನ ನೌಕರರ ಹಾಗೂ ಎಸ್.ಸಿ/ಎಸ್.ಟಿ ನೌಕರರ ನ್ಯಾಯಯುತವಾದ ಬೇಡಿಕೆಗಳನ್ನು ಬಗೆಹರಿಸುವಂತೆ ವಿನಂತಿಸಲಾಯಿತು.
ಈ ಸಂದರ್ಭದಲ್ಲಿ ವಿಶೇಷಚೇತನ ನೌಕರರ ಸಂಘದ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಬಸವರಾಜ ಹೆಳವರ, ಇ.ಪಿ.ಎಫ್ ಎಸ್.ಸಿ/ಎಸ್.ಟಿ ನೌಕರರ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಯಶಂಕರ, ವಿಠ್ಠಲ, ಸತ್ಯನಾರಾಯಣ, ಪದ್ಮನಾಭ ಶಾನಭಾಗ, ರಮೇಶ, ಮಚನಿ ಗಾಯತ್ರಿ ಹಾಗೂ ಇನ್ನಿತರ ಸದಸ್ಯರು ಹಾಜರಿದ್ದರು.