ನಂಜುಂಡ ನಾಯ್ಕರಿಗೆ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ
ಸಂಜೆವಾಣಿ ನ್ಯೂಸ್
ನಂಜನಗೂಡು.ಜು.07:- ತಂತ್ರಜ್ಞಾನ ಬೆಳೆದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪತ್ರಿಕೆಗಳು ಸಂಕಷ್ಠದ ಪರಿಸ್ಥಿತಿ ಎದುರಿಸುತ್ತಿದ್ದರೂ ಸಮಾಜದ ಒಳಿತಿಗಾಗಿ ತಮ್ಮ ಪಾಲಿನ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುತ್ತಿವೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ನಗರದ ಶ್ರಾವಣ ಕಲ್ಯಾಣ ಮಂಟಪದಲ್ಲಿ ಶನಿವಾರ ತಾಲ್ಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಸಮಸ್ಯೆಗಳನ್ನು ಪತ್ರಕರ್ತರು ತಮ್ಮ ಲೇಖನಿಯ ಮೂಲಕ ಅ ಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರುವುದರ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಿರಂತರವಾಗಿ ದುಡಿಯುತ್ತಿದ್ದಾರೆ. ಗ್ರಾಮಗಳಲ್ಲಿ ಸಮಸ್ಯೆಗಳು ಉದ್ಬವಿಸಿದಾಗ ಹಾಗೂ ಜನ ಸಂಪರ್ಕ ಸಭೆ ಮುಂತಾದ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನನ್ನ ಜೊತೆ ನಿಂತು ಸಹಕರಿಸುತ್ತಿದ್ದಾರೆ, ಕ್ಷೇತ್ರದ ಅಭಿವೃದ್ಧಿಯ ಕಾರ್ಯಗಳ ಬಗ್ಗೆ ಜನರಿಗೆ ತಲುಪಿಸುವಲ್ಲಿ ಪತ್ರಿಕೆಗಳ ಪಾತ್ರ ಹಿರಿದಾದುದು, ಹಿರಿಯ ಪತ್ರಕರ್ತ ಸುತ್ತೂರು ನಂಜುಂಡನಾಯ್ಕ ಅವರಿಗೆ ಈ ಬಾರಿಯ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ದೊರೆತಿರುವುದು ಸಂತೋಷ ತಂದಿದೆ ಎಂದು ಹೇಳಿದರು.
ಜೆ.ಎಸ್.ಎಸ್ ಸಂಸ್ಥೆಯ ಆಡಳಿತಾಧಿಕಾರಿ ಎಸ್.ಪಿ.ಉದಯಶಂಕರ್ ಮಾತನಾಡಿ ಶಾಸಕಾಂಗ,ಕಾರ್ಯಾಂಗ,ನ್ಯಾಯಾಂಗಗಳ ಜೊತೆಗೆ ನಾಲ್ಕನೇ ಅಂಗವಾಗಿರುವ ಮಾಧ್ಯಮ ಕ್ಷೇತ್ರ ಸರ್ಕಾರದ ಆಡಳಿತಕ್ಕೆ ಕನ್ನಡಿಯಾಗಿ,ದೇಶದ ಜನಸಾಮಾನ್ಯರ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ.ಸುತ್ತೂರು ಶ್ರೀ ಮಠ ತಾಲ್ಲೂಕಿನ ಪತ್ರಕರ್ತರನ್ನು ಪೆÇ್ರೀತ್ಸಾಹಿಸುವ ಸಲುವಾಗಿ ಪ್ರತಿವರ್ಷ ಪತ್ರಕರ್ತರಿಗೆ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸುತ್ತಿದೆ, ಕಳೆದ 20 ವರ್ಷಗಳಿಂದ ತಾಲ್ಲೂಕಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಸುತ್ತೂರು ನಂಜುಂಡನಾಯ್ಕರಿಗೆ ಪ್ರಶಸ್ತಿ ನೀಡಲು ಸಂಸ್ಥೆ ಹರ್ಷಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕ್ರಮವಾಗಿ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಎಚ್.ಎಸ್.ಕುಶಾಲ್ ಕುಮಾರ್ ಹಾಗೂ ಕೆ.ಕೃತಿಕಾ ಅವರಿಗೆ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖಂಡರಾದ ಕಳಲೆ ಕೇಶವಮೂರ್ತಿ,ತ್ರಿಪುರಾಂತಕ, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ್,ಸತ್ಯನಾರಾಯಣ,ಹುಲ್ಲಹಳ್ಳಿ ಶ್ರೀನಿವಾಸ್, ಮಧು,ಪ್ರತಾಪ್, ಕೃಷ್ಣಪ್ಪಗೌಡ,ದೀಪಕ್,ಬಸವರಾಜು,ಚಂದ್ರಶೇಖರ್,ಕೆಂಪೇಗೌಡ ಉಪಸ್ಥಿತರಿದ್ದರು.