ವಿವಿಧ ಕಡೆ ದಾಳಿ:೪ ಬಾಲ ಕಾರ್ಮಿಕರ ರಕ್ಷಣೆ
ವಿಜಯಪುರ.ಜು೭:ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-೧೦೯೮ ಇವರು ಜಂಟಿಯಾಗಿ ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ-೧೦೯೮ ಜಂಟಿಯಾಗಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು.ಈ ತಪಾಸಣೆ ವೇಳೆಯಲ್ಲಿ ೦೪ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಮುಂದೆಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಿದರು.ಅಲ್ಲದೇ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ
ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು,೧೪ ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ ೧೮ ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ
ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ ೦೬ ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ ೦೨ ವರ್ಷದವರೆಗೂಜೈಲು ಶಿಕ್ಷೆ ಹಾಗೂ ರೂ. ೨೦,೦೦೦/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. ೫೦,೦೦೦/- ಸಾವಿರದವರೆಗೆ ದಂಡ
ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.
ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ೧೯೮೬ ಹಾಗೂ ತಿದ್ದುಪಡಿಕಾಯ್ದೆ ೨೦೧೬ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆವಿತರಿಸುವ ಮೂಲಕ ಇನ್ನು
ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳಸಹಾಯವಾಣಿ ೧೦೯೮ ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ ೧೧೨ ಕರೆ ಮಾಡುವುದರ ಮೂಲಕಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು
ಸೂಚಿಸಿದರು.
ಅಲ್ಲದೇ ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕರನ್ನು ದುಡಿಮೆಗೆನೇಮಿಸಿಕೊಂಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಮಾಲೀಕರಿಗೆ ಕರಪತ್ರಗಳನ್ನು ಹಂಚಿ ಮಾಲೀಕರಿಗೆ ಹಾಗೂ ಸ್ಥಳಗಳಲ್ಲಿ ಇದ್ದಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಲಾಯಿತು.ಈ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕಸುಬ್ಬಾರಾವ್ ಎಸ್, ಕಾರ್ಮಿಕ ನಿರೀಕ್ಷಕಿ ಅಂಬಿಕಾ ವೈ, ಶಿಕ್ಷಣ ಇಲಾಖೆಯ ಬಿ ಆರ್ ಸಿ ನಾಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಘಟಕದ ಸಿಬ್ಬಂದಿ ನರಸಿಂಹ ರಾಜು, ಮಕ್ಕಳ ಸಹಾಯವಾಣಿಯ ಮಲ್ಲಿಕಾರ್ಜುನ ಮತ್ತು ಲಾವಣ್ಯ ಹಾಜರಿದ್ದರು.