ಪತ್ರಿಕಾ ದಿನಾಚರಣೆ ಮತ್ತು ಪತ್ರಕರ್ತರಿಗೆ ಡೆಂಗ್ಯೂ ರೋಗ ಕುರಿತು ಜಾಗೃತಿ ಕಾರ್ಯಕ್ರಮ

ಸಂಜೆವಾಣಿ ವಾರ್ತೆ
ಕೆ.ಆರ್.ನಗರ, ಜು.07:- ಪತ್ರಕರ್ತರು ದಿನನಿತ್ಯದ ಕಾರ್ಯನಿರತದ ಜೊತಗೆ ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು ತಿಳಿಸಿದರು.
ಪಟ್ಟಣದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ಪತ್ರಕರ್ತರಿಗೆ ಡೆಂಗ್ಯೂ ರೋಗ ಕುರಿತು ಜಾಗೃತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರ ಪತ್ರಕರ್ತರ ಆರೋಗ್ಯದ ಬಗ್ಗೆ ಹೆಚ್ಚಿನ ರೀತಿಯಲ್ಲಿ ಗಮನ ಹರಿಸಿದೆ ಎಂದರಲ್ಲದೆ ಸರ್ಕಾರದ ಮಹತ್ತರ ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಲು ಪತ್ರಕರ್ತರಿಂದ ಆದ್ದರಿಂದ ರಾಜ್ಯದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಡೆಂಗ್ಯೂ ರೋಗದ ಜಾಗೃತಿ ಬಗ್ಗೆ ಪ್ರತಿಮನೆ ಮನೆಗೂ ಮಾಹಿತಿ ತಲುಪಿಸುವ ಜವಾಬ್ದಾರಿ ನಿಮ್ಮಗಳ ಮೇಲಿದ್ದು ಎಲ್ಲರು ಸಹಕಾರ ನೀಡ ಬೇಕು ಎಂದು ಮನವಿ ಮಾಡಿದರು.
ಮಾರಕ ರೋಗಗಳನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪತ್ರಕರ್ತರ ಸಹಕಾರ ಅಗತ್ಯವಾಗಿದ್ದು ತಾವುಗಳು ತಮ್ಮ ಪತ್ರಿಕೆಗಳಲ್ಲಿ ಆರೋಗ್ಯ ಇಲಾಖೆ ವತಿಯಿಂದ ನಡೆಯುವ ಪ್ರತಿಯೊಂದು ಕಾರ್ಯಕ್ರಮ ಮತ್ತು ಆರೋಗ್ಯ ಸೇವೆಯ ಬಗ್ಗೆ ಪ್ರಚಾರ ಪಡಿಸಬೇಕು ಎಂದು ಮನವಿ ಮಾಡಿದರು.
ಪುರಸಭೆ ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ಜನರಲ್ಲಿ ರೋಗಗಳ ನಿಯಂತ್ರಣ ಮಾಡುವ ಬಗ್ಗೆ ಅರಿವು ಮೂಡಿಸಲು ಕರ ಪತ್ರ ವಿತರಿಸುವುದರ ಜತೆಗೆ ಅಗತ್ಯ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಬೇಕು ಆಗ ಮಾತ್ರ ರೋಗಗಳು ಉಳ್ಬಣವಾಗುವುದನ್ನು ತಡೆಗಟ್ಟಲು ಸಾಧ್ಯ ಈ ಬಗ್ಗೆ ಸ್ಥಳೀಯ ಚುನಾಯಿತ ಸದಸ್ಯರು ಜನರ ಆರೋಗ್ಯದ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಂಡು ಪಟ್ಟಣ ಹಾಗೂ ಗ್ರಾಮಗಳಲ್ಲಿ ಯಾವುದೇ ಸಾಂಕ್ರಾಮಿಕ ರೋಗ ಹರಡದಂತೆ ಕಾಲ ಕಾಲಕ್ಕೆ ಸ್ವಚ್ಚತಾ ಕಾರ್ಯ, ಚರಂಡಿಯನ್ನು ಆಗಾಗ್ಗೆ ಸ್ವಚ್ಚತೆ ಮಾಡಿಸುವಂತೆ ಆರೋಗ್ಯ ಇಲಾಖೆಯಿಂದ ಸುತ್ತೊಲೋ ಕಳುಹಿಸಲಾಗಿದೆ ಎಂದರು.
ಡೆಂಗ್ಯೂ ಜ್ವರ ಹರಡದಂತೆ ನೋಡಿಕೊಳ್ಳಲು ಮತ್ತು ಚಿಕಿತ್ಸೆ ಪಡೆಯಲು ಅನುಕೂಲವಾಗುವ ದೃಷ್ಟಿಯಿಂದ ಸರ್ಕಾರ ಪರೀಕ್ಷೆಗಳಿಗೆ ರಿಯಾಯಿತಿ ದರ ನಿಗದಿ ಮಾಡಿದೆ ಇದರ ಸದ್ಬಳಕೆ ಮಾಡಿಕೊಂಡು ಅನುಮಾನ ಇದ್ದವರು ಸಕಾಲದಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದ ಡಾ.ನಟರಾಜ್ ಅವರು ಡೆಂಗ್ಯೂ ರೋಗ ಸಂಪೂರ್ಣವಾಗಿ ನಿರ್ಮೂಲನೆಯಾಗುವಂತೆ ಮಾಡಲು ಆರೋಗ್ಯ ಇಲಾಖೆ ಸನ್ನದ್ದವಾಗಿದೆ ಎಂದರು.
ಡೆಂಗ್ಯೂ ಜ್ವರ ಮಳೆಗಾಲ ಬಂದಾಗ ಶುದ್ದವಾಗಿರುವ ನೀರಿನಿಂದ ಹರಡುತ್ತದೆ ರೋಗ ಹರಡಲು ಕಾರಣವಾದ ಸೊಳ್ಳೆಗಳನ್ನು ನಾಶಮಾಡಲು ಸಾರ್ವಜನಿಕರು ಆಗ್ಗಿಂದ್ದಾಗೆ ಕುಡಿಯುವ ನೀರು ಸೇರಿದಂತೆ ಸಂಗ್ರಹಣ ಮಾಡಿ ಹಿಡಲಾದ ನೀರನ್ನು ಬದಲಾವಣೆ ಮಾಡುವುದರ ಜತೆಗೆ ಮನೆಯ ಸುತ್ತಮುತ್ತ ಸ್ವಚ್ಚತೆ ಕಾಪಾಡಬೇಕು ಎಂದು ಕಾರ್ಯಗಾರದಲ್ಲಿ ಸಲಹೆ ನೀಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು ಅವರು ಅನುಮಾನವಿದ್ದಲ್ಲಿ ಸ್ಥಳೀಯ ಆಶಾ, ಅಂಗನವಾಡಿ ಕಾರ್ಯಕರ್ತರ ಸಹಕಾರ ಪಡೆಯಬೇಕೆಂದು ತಿಳಿಸಿದರು.
ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳಲ್ಲಿ ಈವರೆಗೆ 30 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು 200 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಯಾವುದೇ ಸಾವು ಸಂಭವಿಸಿಲ್ಲ ಎಂದರಲ್ಲದೆ ಸಾವು ಆಗದಂತೆ ಎಚ್ಚರ ವಹಿಸಲಾಗಿದ್ದು ಈ ಸಂಬಂಧ ಶಾಲಾ ಕಾಲೇಜುಗಳು ಹಾಗೂ ಸಾರಿಗೆ ಸಂಸ್ಥೆಗಳಲ್ಲಿ ಇಲಾಖೆ ವತಿಯಿಂದ ಪ್ರಚಾರ ಮಾಡಲಾಗಿದೆ ಇದರ ಜತೆಗೆ ಆಶಾ ಕಾರ್ಯಕರ್ತೆಯವರಿಗೆ ಉತ್ತಮ ತರಬೇತಿ ನೀಡಲಾಗಿದೆ.
-ಡಾ.ಡಿ.ನಟರಾಜು, ತಾಲೂಕು ಆರೋಗ್ಯಾಧಿಕಾರಿ.
ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿನಯ್‍ದೊಡ್ಡಕೊಪ್ಪಲು ಹಾಗೂ ಪ್ರಧಾನ ಕಾರ್ಯದರ್ಶಿ ಭೇರ್ಯಮಹೇಶ್ ಮತ್ತು ಪದಾಧಿಕಾರಿಗಳ ಜೊತೆ ತಾಲೂಕು ಆರೋಗ್ಯಾಧಿಕಾರಿಗಳು ಪತ್ರಕರ್ತರನ್ನು ಆಹ್ವಾನಿಸಿ ಕೇಕ್ ಕತ್ತರಿಸುವ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಿದ್ದಲ್ಲದೆ ಎಲ್ಲಾ ಪತ್ರಕರ್ತರಿಗೂ ಭಗವದ್ಗೀತಾ ಪುಸ್ತಕ ವಿತರಣೆ ಮಾಡಿ ಗೌರವ ಸಲ್ಲಿಸಿದರು.
ಹಿರಿಯ ಆರೋಗ್ಯ ನಿರೀಕ್ಷ ಮಹೇಶ್, ಕೆ.ವಿ.ರಮೇಶ್, ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ,, ಆರೋಗ್ಯ ಸುರಕ್ಷಣಾಧಿಕಾರಿ ಪಾರ್ವತಿ ಮತ್ತಿತರರು ಹಾಜರಿದ್ದರು.