ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಭಿತ್ತಿಪತ್ರ ಬಿಡುಗಡೆ
ಕಲಬುರಗಿ:ಜು.6: ಜು. 11ರಂದು 2024ನೇ ಸಾಲಿನ ವಿಶ್ವ ಜನಸಂಖ್ಯಾ ದಿನಾಚರÀಣೆ ಹಿನ್ನೆಲೆಯಲ್ಲಿ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಹಾಗೂ ಸಮುದಾಯ ಜಾಗತೀಕರಣ ಪಾಕ್ಷಿಕ ಕಾರ್ಯಕ್ರಮಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಜುಲೈ 2 ರಂದು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಾಗೃತಿ ಭಿತ್ತಿ ಪತ್ರ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.
“ಸರಿಯಾದ ಸಮಯದಲ್ಲಿ ಗರ್ಭಧಾರಣೆ ಹಾಗೂ ಅಂತರ ಕಾಪಾಡುವರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮ ಗೊಳಿಸುವುದು” ಈ ವರ್ಷ ದಿನಾಚರಣೆಯ ಧ್ಯೆಯವಾಗಿದೆ. ಅಭಿವೃದ್ದಿ ಹೊಂದಿದ ಭಾರತದ ಹೊಸ ಗುರುತಿಗಾಗಿ ಕುಟುಂಬ ಯೋಜನೆ ಅಳವಡಿಕೆಯು ಪ್ರತಿ ದಂಪತಿಗಳಿಗೆ ಹೆಮ್ಮೆ ತರುತ್ತದೆ. ವಿಶ್ವಜನಸಂಖ್ಯಾ ದಿನಾಚರಣೆಯ ಘೋಷವಾಕ್ಯ “ವಾಗಿದೆ.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಾತನಾಡಿ, ಜುಲೈ 11 ರಿಂದ 24 ರವರೆಗೆ ಜರುಗುವ ಸೇವಾ ಪಾಕ್ಷಿಕದ ಅಂಗವಾಗಿ ಜಿಲ್ಲೆಯಾದ್ಯಂತ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಉಚಿತವಾಗಿ IUಅಆ ಅಳವಡಿಕೆ, ಅಂತರ ಚುಚ್ಚುಮದ್ದು, ಮಹಿಳಾ ಸಂತಾನ ನೀರೋಧ ಶಸ್ತ್ರ ಚಿಕಿತ್ಸೆ, ಪುರುಷ ಸಂತಾನ ನೀರೋಧ ಶಸ್ತ್ರ ಚಿಕಿತ್ಸೆ, ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮದ ಇತರ ಸೌಲಭ್ಯಗಳು ಹಾಗೂ ಉಚಿತ ಆಪ್ತ ಸಮಾಲೋಚನೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವಶರಣಪ್ಪ ಎಂ.ಡಿ., ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ. ರಾಜಕುಮಾರ ಕುಲಕರ್ಣಿ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞರು ಹಾಗೂ ಅಧೀಕ್ಷಕ ಡಾ. ಓಂ ಪ್ರಕಾಶ ಅಂಬೂರೆ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಸುರೇಶ ಮೇಕಿನ್, ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ. ಚಂದ್ರಕಾಂತ ನರಿಬೋಳ ಹಾಗೂ ಜಿಲ್ಲಾ ಕಾಲರಾ ಅಧಿಕಾರಿ ಡಾ. ವಿವೇಕಾನಂದ ರೆಡ್ಡಿ ಸೇರಿದಂತೆ ಖಾಸಗಿ ವೈದ್ಯಾಧಿಕಾರಿಗಳು ಉಪಸ್ಧಿತರಿದ್ದರು.